ಬೇಬಿ ಬಂಪ್‌ ಫೋಟೋಶೂಟ್‌ನಲ್ಲಿ ನಿರ್ದೇಶಕ ಪವನ್ ಒಡೆಯರ್ ಪತ್ನಿ

ಮತ್ತೆ ತಾಯಿ ಆಗುತ್ತಿರುವ ಖುಷಿಯಲ್ಲಿ ಅಪೇಕ್ಷಾ ಪವನ್ ಒಡೆಯರ್.

ನಿರ್ದೇಶಕ ಪವನ್ ಒಡೆಯರ್ ಪತ್ನಿ ಸೋಶಿಯಲ್​​ ಮೀಡಿಯಾಗಳಲ್ಲಿ ಬೇಬಿ ಬಂಪ್‌ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಗೂಗ್ಲಿ, ನಟಸಾರ್ವಭೌಮ, ರಣ ವಿಕ್ರಮ ಮುಂತಾದ ಹಿಟ್​​​​ ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಪವನ್ ಒಡೆಯರ್. 

ಅಪೇಕ್ಷಾ ಕೂಡ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿ ಗುರುತಿಸಿಕೊಂಡಿರುವ ನಟಿ.

ಈ ಜೋಡಿ 2018ರ ಆಗಸ್ಟ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 

2020 ಡಿಸೆಂಬರ್​​​ 10ರಂದು ಅಪೇಕ್ಷಾ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಇದೀಗಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.