ಡ್ರ್ಯಾಗನ್ ಹಣ್ಣಿನ ಆರೋಗ್ಯ ಪ್ರಯೋಜನಗಳು

ಡ್ರ್ಯಾಗನ್ ಹಣ್ಣಿನ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ.

ಆದರೆ ಈ ವಿಶೇಷ ಹಣ್ಣು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಡ್ರ್ಯಾಗನ್ ಫ್ರೂಟ್ ಕಿವಿ ಮತ್ತು ಪೇರಳೆ ಹಣ್ಣಿನ ಮಿಶ್ರಣದಂತೆ ರುಚಿಯನ್ನು ಹೊಂದಿದೆ.

ಇದು ಹೆಚ್ಚಿನ ಪ್ರಮಾಣದ ಫೈಬರ್ ಹೊಂದಿದ್ದು, ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ಈ ಹಣ್ಣು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದ್ದು, ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. 

ಈ ಹಣ್ಣಿನಲ್ಲಿ ಹೆಚ್ಚಿನ ಮಟ್ಟದ ವಿಟಮಿನ್ ಸಿ ಇದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದರಲ್ಲಿ ಕಾರ್ಬೋಹೈಡ್ರೇಟ್ ಸಮೃದ್ಧವಾಗಿದ್ದು, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಇದರ ಒಳಗಿರುವ ಕಪ್ಪು ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದ್ದು, ಹೃದಯದ ಆರೋಗ್ಯ ಕಾಪಾಡುತ್ತದೆ.

ಈ ಹಣ್ಣಿನ ಪುಡಿಯನ್ನು ಒಂದು ಲೋಟ ಹಾಲಿನೊಂದಿಗೆ ಬೆರೆಸಿ ಕುಡಿಯುವುದು ಕೂದಲ ಬೆಳವಣೆಗೆಗೆ ಸಹಾಯಕ.