ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600 ಅಂಕಗಳಿಗೆ 597 ಅಂಕ ಪಡೆದಿದ್ದಾರೆ.
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದ ಶ್ರೀಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿಕೆ.ನಿರ್ಮಲಾ ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಗರ ಪಿಯು ಕಾಲೇಜಿನ ವಿದ್ಯಾರ್ಥಿನಿ ಇನೇಷ್ಕಾ ನಡುಗಡ್ಡಿ ಕಲಾ ವಿಭಾಗದಲ್ಲಿ 600ಕ್ಕೆ 594 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದ ಪಿಯು ಕಾಲೇಜು ವಿದ್ಯಾರ್ಥಿನಿ ಕಾವೇರಿ ಪವಾಡಿ ಮಲ್ಲಾಪುರ 600ಕ್ಕೆ 594 ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕ ಪಡೆದಿರುವ ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಆರ್.ದೀಕ್ಷಾ ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಮಂಗಳೂರಿನ ಕಡೈಲ್ಬೈಲ್ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಸ್.ದೀಪಾಶ್ರೀ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತಮ್ಮ ಪಿಯು ಕಾಲೇಜಿನ ವಿದ್ಯಾರ್ಥಿನಿ 600ಕ್ಕೆ 598 ಅಂಕ ಪಡೆಯುವ ಮೂಲಕ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾರೆ.
ಕೋಲಾರದ ನ್ಯೂ ಎಕ್ಸ್ಟ್ಟೆನ್ಷನ್ ಮಹಿಳಾ ಸಮಾಜ ಪಿಯು ಕಾಲೇಜಿನ ವಿದ್ಯಾರ್ಥಿನಿ ಹೆಚ್.ಬಿ.ಭಾರ್ಗವಿ 600ಕ್ಕೆ 597 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.