ಈ ಪರೀಕ್ಷೆ 3 ಹಂತಗಳಲ್ಲಿ ನಡೆಯುತ್ತೆ. ಲಕ್ಷಾಂತರ ಮಂದಿ ಈ ಪರೀಕ್ಷೆಯನ್ನು ಬರೆದರೂ ಆಯ್ಕೆ ಆಗುವುದು ಕೇವಲ 1% ಕ್ಕಿಂತ ಕಡಿಮೆ ಜನ. ಇದು IAS, IPS, IFS ಮತ್ತು ಕೇಂದ್ರ ಸೇವೆಗಳ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುತ್ತೆ.
UPSC ನಾಗರಿಕ ಸೇವೆಗಳ ಪರೀಕ್ಷೆ (UPSC CSE)
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರಾಷ್ಟ್ರೀಯ JEE ಪರೀಕ್ಷೆಯನ್ನು ನಡೆಸುತ್ತದೆ. ಎನ್‌ಐಟಿ, ಐಐಟಿ ಮತ್ತು ಇತರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆ ನಡೆಸಲಾಗುತ್ತೆ.
ಜಂಟಿ ಪ್ರವೇಶ ಪರೀಕ್ಷೆ (ಜೆಇಇ)
ಎಂಜಿನಿಯರಿಂಗ್ ಮತ್ತು ವಿಜ್ಞಾನದಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸಲು ಮತ್ತು GAIL ನಂತಹ ಕಂಪನಿಗಳಲ್ಲಿ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನೀಡಲಾಗುತ್ತದೆ. ಪ್ರಾಥಮಿಕ, ಸ್ನಾತಕೋತ್ತರ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯುತ್ತದೆ.
ಎಂಜಿನಿಯರಿಂಗ್‌ನಲ್ಲಿ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ (ಗೇಟ್)
CAT ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದೆ. IIM ಇದನ್ನು ನಡೆಸುತ್ತದೆ. ಇದು MBA ಪ್ರವೇಶಕ್ಕಾಗಿ ನಡೆಯುವ ಪರೀಕ್ಷೆ. ಸ್ನಾತಕೋತ್ತರ ಪದವಿಯಲ್ಲಿ 50% ಸ್ಕೋರ್ ಹೊಂದಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.
ಸಾಮಾನ್ಯ ಪ್ರವೇಶ ಪರೀಕ್ಷೆ (CAT)
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಎನ್‌ಡಿಎ ಪರೀಕ್ಷೆಯನ್ನು ನಡೆಸುವ ಅಧಿಕಾರವನ್ನು ಹೊಂದಿದೆ. ಆಯ್ಕೆಯಾದ ಅಭ್ಯರ್ಥಿಗಳು ಎನ್‌ಡಿಎಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವಿಭಾಗಗಳಿಗೆ ಪ್ರವೇಶಿಸಲು ಅವಕಾಶವನ್ನು ಪಡೆಯುತ್ತಾರೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA)
ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಭಾರತದಲ್ಲಿನ 24 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾನೂನು ಕೋರ್ಸ್ಗಳಿಗಾಗಿ ಪ್ರವೇಶಕ್ಕಾಗಿ ವಾರ್ಷಿಕ CLAT ಪರೀಕ್ಷೆಯನ್ನು ನಡೆಸಲಾಗುತ್ತೆ.
ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT)
ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಸಿಎ ಪರೀಕ್ಷೆಯನ್ನು ನಡೆಸುತ್ತದೆ. ಅರ್ಹತೆ ಪಡೆಯುವ ಅಭ್ಯರ್ಥಿಗಳು ಚಾರ್ಟರ್ಡ್ ಅಕೌಂಟೆಂಟ್ ಆಗುತ್ತಾರೆ.
ಚಾರ್ಟರ್ಡ್ ಅಕೌಂಟೆಂಟ್ (CA)
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆಯನ್ನು ನಡೆಸುತ್ತದೆ. ಬ್ಯಾಚುಲರ್ ಆಫ್ ಮೆಡಿಸಿನ್, ಬ್ಯಾಚುಲರ್ ಆಫ್ ಸರ್ಜರಿ (MBBS), ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (BDS), ಆಯುಷ್, ಮತ್ತು ಪಶುವೈದ್ಯಕೀಯ ಕೋರ್ಸ್‌ಗಳಂತಹ ವಿವಿಧ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕಾಗಿ ಇದನ್ನು ನಡೆಸಲಾಗುತ್ತದೆ.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)
ಸಹಾಯಕ ಪ್ರಾಧ್ಯಾಪಕರಾಗಲು ಅಥವಾ ಜೂನಿಯರ್ ಸಂಶೋಧನಾ ಫೆಲೋಶಿಪ್ ಪಡೆಯಲು ಬಯಸುವವರಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತದೆ.