ಕರ್ನಾಟಕ ಮೂಲದ ಚೆಲುವೆ ಅನುಷ್ಕಾ ಶೆಟ್ಟಿ, ಟಾಲಿವುಡ್​ನಲ್ಲಿ ಟಾಪ್ ನಟಿಯಾಗಿ ಮೆರೆದವರು. ನಟಿಯಾಗಿ ಜನಪ್ರಿಯವಾಗಿದ್ದ ಅನುಷ್ಕಾ ರಾಜಕಾರಣಿಯಾಗುತ್ತಿದ್ದಾರೆ.

27 Mar 2024

Author : Manjunatha

ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.

ರಾಜಕೀಯಕ್ಕೆ ಎಂಟ್ರಿ

ಲೋಕಸಭೆ ಚುನಾವಣೆ ಜೊತೆಗೆ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಸಹ ನಡೆಯಲಿದ್ದು, ನಟಿ ಅನುಷ್ಕಾ ಶೆಟ್ಟಿ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ವಿಧಾನಸಭೆ ಚುನಾವಣೆ

ನಟಿ ಅನುಷ್ಕಾ ಶೆಟ್ಟಿ, ಪವನ್ ಕಲ್ಯಾಣ್​ರ ಜನಸೇನಾ ಪಕ್ಷಕ್ಕೆ ಸೇರಿಕೊಳ್ಳಲಿದ್ದಾರೆ. ಜನಸೇನಾ ಪಕ್ಷಕ್ಕೆ ಬಿಜೆಪಿ ಹಾಗೂ ಟಿಡಿಪಿ ಬೆಂಬಲವಿದ್ದು ಇದೇ ಕಾರಣದಿಂದ ಅನುಷ್ಕಾ, ಜನಸೇನಾ ಸೇರಲಿದ್ದಾರೆ ಎನ್ನಲಾಗುತ್ತಿದೆ.

ಜನಸೇನಾ ಪಕ್ಷಕ್ಕೆ ಸೇರ್ಪಡೆ

ಜನಸೇನಾ ಪಕ್ಷದಿಂದ ಲೋಕಸಭಾ ಅಭ್ಯರ್ಥಿಯಾಗಿ ಅನುಷ್ಕಾ ಶೆಟ್ಟಿ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಸುದ್ದಿ ಇದೆ. ಅದರ ಜೊತೆಗೆ ಅನುಷ್ಕಾ ಶೆಟ್ಟಿ ಕೇವಲ ಸ್ಟಾರ್ ಪ್ರಚಾರಕಿ ಆಗಿಯಷ್ಟೆ ಇರಲಿದ್ದಾರೆ ಎಂಬ ಮಾತುಗಳು ಸಹ ಇವೆ.

ಅಭ್ಯರ್ಥಿಯಾಗಿ ಅನುಷ್ಕಾ 

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಸುದ್ದಿ ನಕಲಿ ಎಂದು ಸಹ ಕೆಲವು ಮೂಲಗಳು ವರದಿ ಮಾಡಿವೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ರಾಜಕೀಯದಿಂದ ದೂರ

ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕತೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.

ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ

ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ. ಮಲಯಾಳಂನಲ್ಲಿ ಹಾರರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ಮಲಯಾಳಂ ಹಾರರ್ 

‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ಅನ್ನು ತೆಗೆದುಕೊಂಡಿದ್ದಾರೆ. ಬಾಹುಬಲಿ 2 ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ.

ಸಿನಿಮಾಗಳಿಂದ ಬ್ರೇಕ್

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ.

ಅಭಿಮಾನಿಗಳ ಆಶಯ

nqನಟಿ ತಮನ್ನಾ ಭಾಟಿಯಾ ಧರಿಸಿರುವ ಈ ಕಪ್ಪು ಉಡುಪಿನ ಬೆಲೆ ಎಷ್ಟು ಲಕ್ಷ ರೂಪಾಯಿಗಳು ಗೊತ್ತೆ?