ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಗದಗ ಜಿಲ್ಲೆಯ ಶಿಲ್ಪಿಗೆ ಆ
ಹ್ವಾನ
10 Dec 2023
Author: Vivek Biradar
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಶಿಲ್ಪಿ ನಾಗಮೂರ್ತಿ ಅವರಿಗೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ
್ಯಕ್ಕೆ ಆಹ್ವಾನ ಬಂದಿದೆ.
ನಾಗಮೂರ್ತಿ ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿಯಾಗಿದ್ದಾರೆ. ಹೆಚ್.ಡಿ ಕೋಟೆಯಲ್ಲಿ ದೊರೆಯುವ ಕರಿಕಲ್ಲುಗಳನ್ನ (ಕೃಷ್ಣ ಶಿಲೆ) ಬಳಸಿ ಮೂರ್ತಿ ತಯಾರು ಮಾಡುತ್ತಾರೆ.
ನಾಗಮೂರ್ತಿ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಗಂಧ ಕಲಾ ಸಂಕಿರಣ ಕಲಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ.
ಹಲವು ವರ್ಷ ಶಿಲ್ಪ ಕಲೆಯ ಬಗ್ಗೆ ಮುಂಡರಗಿ ವೆಂಕಟೇಶ ಸುತಾರ ಎಂಬವರ ಹತ್ತಿರ ತರಬೇತಿ ಪಡೆದರು.
ನಾಗಮೂರ್ತಿ ತಾನೇ ಸ್ವತಂತ್ರವಾಗಿ ಮೂರ್ತಿ ಕೆತ್ತನೆ ಆರಂಭಿಸಿದ್ದಾರೆ.
ಈವಾಗ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಆಮಂತ್ರಣ ಬಂದಿದೆ.
ಅಯೋಧ್ಯೆಗೆ ಆಹ್ವಾನ ಬಂದಿರುವ ಹಿನ್ನಲೆ ನಾಗಮೂರ್ತಿಗೆ ಸ್ಥಳೀಯರು ಸನ್ಮಾನ ಮಾಡಿ, ಗೌರವಿಸಿ ಅಯೋಧ್
ಯೆಗೆ ಕಳುಹಿಸಿಕೊಟ್ಟಿದ್ದಾರೆ.
ಕಿಯಾರಾ ಮುಡಿಗೆ ಮತ್ತೊಂದು ವಿಶೇಷ ಗರಿ
ಇದನ್ನೂ ನೋಡಿ