ಖಾಲಿ ಹೊಟ್ಟೆಯಲ್ಲಿ ಎಂದಿಗೂ ಈ ಆಹಾರಗಳನ್ನು ಸೇವಿಸಬೇಡಿ
ಬೆಳಗ್ಗಿನ ಉಪಹಾರವು ನಿಮ್ಮನ್ನು ದಿನಪೂರ್ತಿ ಉಲ್ಲಾಸದಿಂದಿರಲು ಸಹಾಯಮಾಡುತ್ತದೆ.
ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸುವುದರಿಂದ ಅದು ಅನಾರೋಗ್ಯಕ್ಕೆ ಕಾರಣವಾಗಬಹುದು.
ಚಹಾ ಅಥವಾ ಕಾಫಿ: ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಜೀರ್ಣಕ್ಕೆ ಕಾರಣವಾಗಬಹುದು.
ಜೇನುತುಪ್ಪ: ಶುದ್ಧ ಜೇನುತುಪ್ಪ ಸಿಗುವುದು ಅಷ್ಟು ಸುಲಭವಲ್ಲ. ಆದ್ದರಿಂದ ಕಲಬೆರಕೆಯ ಜೇನುತುಪ್ಪ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ.
ಸಿಹಿ ಉಪಹಾರವನ್ನು ಬೆಳಗ್ಗೆ ಸೇವಿಸುವುದರಿಂದ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಲು ಕಾರಣವಾಗಬಹುದು.
ಕರಿದ ಆಹಾರಗಳನ್ನು ಬೆಳಗ್ಗೆ ಸೇವಿಸುವುದರಿಂದ ದಿನವಿಡೀ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು.