Pic Credit: pinterest
By Preeti Bhat
05 July 2025
ಟೊಮೇಟೊ! ಈ ಹೆಸರನ್ನು ಕೇಳದವರೇ ಇಲ್ಲ. ಪ್ರತಿ ಮನೆಯಲ್ಲಿಯೂ ಈ ತರಕಾರಿ ಇಲ್ಲದೆಯೇ ಅಡುಗೆ ತಯಾರಾಗುವುದಿಲ್ಲ.
ಇದು ಯಾವುದೇ ಅಡುಗೆ ಇರಲಿ ತನ್ನದೇ ಆದಂತಹ ರುಚಿ ನೀಡಿ ಅಡುಗೆಯ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು.
ಟೊಮೇಟೊದಲ್ಲಿ ಲೈಕೋಪೀನ್ ಎಂಬ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಿದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಟೊಮೇಟೊದಲ್ಲಿ ಕಂಡು ಬರುವ ಪೊಟ್ಯಾಸಿಯಮ್ ಅಂಶ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಟೊಮೇಟೊಗಳು ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ಟೊಮೇಟೊ ಕ್ಯಾನ್ಸರ್ ತಡೆಗಟ್ಟುವಿಕೆಗೂ ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ.
ಪ್ರಾಸ್ಟೇಟ್, ಶ್ವಾಸಕೋಶ, ಹೊಟ್ಟೆ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ.
ಟೊಮೇಟೊದಲ್ಲಿ ವಿಟಮಿನ್ ಕೆ ಮತ್ತು ಕ್ಯಾಲ್ಸಿಯಂ ಇದ್ದು, ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.