ಪೇರಳೆ ಹಣ್ಣು ರುಚಿಕರ ಮಾತ್ರವಲ್ಲ. ಇದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡುವುದು ಬಹಳ ಮುಖ್ಯವಾಗಿದೆ.
Pic credit - Pintrest
ಪೇರಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಶೀತದಂತಹ ಸಾಮಾನ್ಯ ಕಾಯಿಲೆಗಳಿಂದ ರಕ್ಷಿಸುತ್ತದೆ.
Pic credit - Pintrest
ಈ ಹಣ್ಣಿನಲ್ಲಿ ಫೈಬರ್ ಸಮೃದ್ಧವಾಗಿದ್ದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ತಡೆಯುತ್ತದೆ. ಇದು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
Pic credit - Pintrest
ಈ ಹಣ್ಣು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ. ಪೊಟ್ಯಾಸಿಯಮ್ ಅಧಿಕವಾಗಿರುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Pic credit - Pintrest
ಪೇರಳೆ ಎಲೆಗಳ ರಸವೂ ಆರೋಗ್ಯಕ್ಕೆ ಒಳ್ಳೆಯದು. ಇದು ಮುಟ್ಟಿನ ಸಮಯದಲ್ಲಿ ಬರುವ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Pic credit - Pintrest
ಆದರೆ ಪೇರಳೆ ಹಣ್ಣನ್ನು ತಿನ್ನಲು ಒಂದು ಸಮಯವಿದೆ. ಊಟದ ನಂತರ ಒಂದೂವರೆ ಅಥವಾ ಎರಡು ಗಂಟೆಗಳ ನಂತರ ಪೇರಳೆ ತಿನ್ನುವುದು ಉತ್ತಮ.
Pic credit - Pintrest
ಖಾಲಿ ಹೊಟ್ಟೆಯಲ್ಲಿ ಪೇರಳೆ ತಿನ್ನುವುದು ಕೆಲವೊಮ್ಮೆ ಗ್ಯಾಸ್ ಸಮಸ್ಯೆಗಳಿಗೆ ಕಾರಣವಾಗಬಹುದು. ಪೇರಳೆ ಹಣ್ಣನ್ನು ಸರಿಯಾದ ಸಮಯದಲ್ಲಿ ಸೇವಿಸುವುದರಿಂದ ಅದರ ಸಂಪೂರ್ಣ ಪ್ರಯೋಜನಗಳನ್ನು ಪಡೆಯಬಹುದು.
Pic credit - Pintrest
ಬಾಯಿಯ ದುರ್ವಾಸನೆಯಿಂದ ಮುಕ್ತಿ ಪಡೆಯಲು ಇಲ್ಲಿವೆ ಮನೆಮದ್ದು