Pic Credit: pinterest
By Preeti Bhat
13 June 2025
ಆರೋಗ್ಯ ಚೆನ್ನಾಗಿ ಇರಬೇಕು ಎಂದರೆ ನಮ್ಮ ಆಹಾರ ಕ್ರಮದ ಜೊತೆಗೆ ನಿದ್ರೆಯೂ ಸರಿಯಾಗಿ ಮಾಡಬೇಕಾಗುತ್ತದೆ.
ನಿದ್ರೆ ಸರಿಯಾಗಿ ಬರದಿರುವುದಕ್ಕೆ ತಿನ್ನುವ ಆಹಾರ ಕೂಡ ಕಾರಣವಾಗಿರಬಹುದು. ಅದಕ್ಕಾಗಿಯೇ ಮಲಗುವ ಮೊದಲು ಈ ಆಹಾರಗಳಿಂದ ದೂರವಿರಿ.
ರಾತ್ರಿ ಸಮಯದಲ್ಲಿ ಮಾಂಸಾಹಾರದಿಂದ ದೂರವಿರುವುದು ಉತ್ತಮ. ಇದರಲ್ಲಿ ಕೊಬ್ಬು ಮತ್ತು ಪ್ರೋಟೀನ್ ಅಂಶ ಅಧಿಕವಾಗಿರುತ್ತವೆ.
ರಾತ್ರಿಯ ಊಟಕ್ಕೆ ಮಸಾಲೆಯುಕ್ತ ಆಹಾರಗಳನ್ನು ಸೇವನೆ ಮಾಡುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು.
ಕೆಲವರು ರಾತ್ರಿ ಊಟ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯುತ್ತಾರೆ. ಇವೆರಡರಲ್ಲಿಯೂ ಕೆಫೀನ್ ಇರುತ್ತದೆ.
ಮಲಗುವ ಮುನ್ನ ಚಹಾ ಅಥವಾ ಕಾಫಿ ಕುಡಿಯುವುದರಿಂದ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ. ನಿದ್ರಾಹೀನತೆಯಂತಹ ಸಮಸ್ಯೆಗೆ ಕಾರಣವಾಗುತ್ತದೆ.
ಹೆಚ್ಚಿನ ಪ್ರಮಾಣದಲ್ಲಿ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರು ಜಂಕ್ ಫುಡ್ ಗಳು ಸುಲಭವಾಗಿ ಜೀರ್ಣವಾಗುವುದಿಲ್ಲ.
ರಾತ್ರಿ ಸಮಯದಲ್ಲಿ ಜಂಕ್ ಫುಡ್ ತಿನ್ನುವುದರಿಂದ ನಿದ್ರೆಗೆ ತೊಂದರೆಯಾಗುತ್ತದೆ. ಜೊತೆಗೆ ಈ ರೀತಿಯ ಅಭ್ಯಾಸ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತದೆ.