ಟೊಮೆಟೋದಲ್ಲಿ ನೈಸರ್ಗಿಕ ವಿಟಮಿನ್ಗಳು ಮತ್ತು ಖನಿಜಗಳಾದ ಎ, ಸಿ, ಕೆ, ಬಿ 1, ಬಿ 3, ಬಿ 5, ಬಿ 6 ಮತ್ತು ಬಿ 7 ಇದ್ದು ಆರೋಗ್ಯಕ್ಕೆ ಬಹಳ ಒಳ್ಳೆಯದು.
Pic credit - Pintrest
ಟೊಮೆಟೋ ಫೋಲೇಟ್, ಕಬ್ಬಿಣ, ಪೊಟ್ಯಾಶಿಯಂ, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.
Pic credit - Pintrest
ಟೊಮೆಟೋ ಲೈಕೋಪೀನ್ ಎಂಬ ರಾಸಾಯನಿಕವನ್ನು ಹೊಂದಿರುತ್ತದೆ. ಇದು ಕ್ಯಾನ್ಸರ್ ಕೋಶಗಳನ್ನು ನಾಶಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
Pic credit - Pintrest
ಟೊಮೆಟೋ ಹೃದಯಕ್ಕೆ ಸಂಬಂಧಿಸಿದ ರೋಗವನ್ನು ತಡೆಯಲು ಕೆಲಸ ಮಾಡುತ್ತದೆ. ಏಕೆಂದರೆ ಇದರಲ್ಲಿ ಪೊಟ್ಯಾಶಿಯಂ, ವಿಟಮಿನ್ ಸಿ, ಫೈಬರ್ ಮತ್ತು ಕೋಲೀನ್ ಸಮೃದ್ಧವಾಗಿದೆ.
Pic credit - Pintrest
ಟೊಮೆಟೋ ಚರ್ಮಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರುವ ಲೈಕೋಪೀನ್ ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸುತ್ತದೆ. ಜೊತೆಗೆ ಚರ್ಮದ ಹೊಳಪು ಹೆಚ್ಚಾಗುತ್ತದೆ.
Pic credit - Pintrest
ಟೊಮೆಟೋದಲ್ಲಿ ವಿಟಮಿನ್ ಸಿ ಇರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ಜೊತೆಯಲ್ಲಿ, ವಿಟಮಿನ್ ಸಿ ಒತ್ತಡದ ಹಾರ್ಮೋನುಗಳ ಬೆಳವಣಿಗೆಯನ್ನು ನಿಯಂತ್ರಿಸಬಹುದು.
Pic credit - Pintrest
ಟೊಮೆಟೋ ಗರ್ಭಿಣಿಯರಿಗೆ ತುಂಬಾ ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಮಗು ಮತ್ತು ಮಹಿಳೆ ಇಬ್ಬರಿಗೂ ಅತ್ಯಗತ್ಯ.