ಅರಿಶಿನದ ಹಾಲಿಗೆ ಕ್ಯಾನ್ಸರ್ ಬರದಂತೆ ತಡೆಯುವ ಶಕ್ತಿ ಇದೆ?

Pic credit - Getty Images

Author: Preethi Bhat Gunavante

TV9 Kannada Logo For Webstory First Slide

5 April 2025

TV9 Kannada Logo For Webstory First Slide

ಅರಿಶಿನದ ಹಾಲಿಗೆ ಕ್ಯಾನ್ಸರ್ ಬರದಂತೆ ತಡೆಯುವ ಶಕ್ತಿ ಇದೆ?

ಅರಿಶಿನದ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆ ಈಗಾಗಲೇ ತಿಳಿದಿರಬಹುದು. ಹೀಗಾಗಿಯೇ ಇದನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಸೇವನೆ ಮಾಡಲಾಗುತ್ತದೆ.

ಆದರೆ ಚಿಟಿಕೆ ಅರಿಶಿನದ ಜೊತೆ ಸ್ವಲ್ಪ ಹಾಲು ಸೇರಿಸಿಕೊಂಡು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇಂತಹ ಅರಿಶಿನ ಹಾಲಿನ ಕೆಲವು ಆರೋಗ್ಯ ಪ್ರಯೋಜನಗಳು ಇಲ್ಲಿವೆ.

ಅರಿಶಿನದಲ್ಲಿರುವ ಕರ್ಕ್ಯುಮಿನ್ ದೇಹದಲ್ಲಿ ಕೀಲು ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಅರಿಶಿನದ ಹಾಲು ನಂಜುನಿರೋಧಕವಾಗಿದ್ದು, ಆಂಟಿಮೈಕ್ರೊಬಿಯಲ್ ಮತ್ತು ಅಲರ್ಜಿ ವಿರೋಧಿ ಗುಣಲಕ್ಷಣಗಳು ಮತ್ತು ಗಾಯವನ್ನು ವೇಗವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ.

ಅರಿಶಿನ ಹಾಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಕಾರಿಯಾಗಿದೆ.

ಅರಿಶಿನದಲ್ಲಿರುವ ಕರ್ಕ್ಯುಮಿನ್ ಕ್ಯಾನ್ಸರ್ ಮತ್ತು ಹೃದ್ರೋಗದಂತಹ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಅರಿಶಿನ ಹಾಲನ್ನು ನಿಯಮಿತವಾಗಿ ಕುಡಿಯುವುದರಿಂದ ಮೆದುಳಿನ ಆರೋಗ್ಯ ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಬಹುದು.

ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ಬಳಲುವವರು ಅರಿಶಿನ ಹಾಲನ್ನು ಕುಡಿಯುವ ಮೂಲಕ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ಕೆಲವರಿಗೆ ಅರಿಶಿನ ಸೇವನೆಯಿಂದ ಅಲರ್ಜಿ ಹೆಚ್ಚಾಗುತ್ತದೆ. ಅಂತವರು ವೈದ್ಯರ ಸಲಹೆ ಪಡೆದುಕೊಂಡು ಆ ಬಳಿಕ ಅರಿಶಿನದ ಹಾಲನ್ನು ಸೇವನೆ ಮಾಡುವುದು ಒಳ್ಳೆಯದು.