Pic Credit: pinterest
By Preeti Bhat
24 May 2025
ಸೋಂಪು, ಬಡೆಸಪ್ಪು ಹೀಗೆ ನಾನಾ ರೀತಿಯ ಹೆಸರುಗಳಿಂದ ಕರೆಯುವ ಈ ಮಸಾಲೆಯಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ.
ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದು ದೈಹಿಕ ದೌರ್ಬಲ್ಯವನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ.
ಇದು ಆಯಾಸ, ಆಲಸ್ಯ, ದುಃಖ ಮುಂತಾದ ರೋಗಲಕ್ಷಣಗಳನ್ನು ನಿವಾರಿಸುತ್ತದೆ.
ಅಲ್ಲದೆ ರಕ್ತಹೀನತೆ ಇರುವವರಿಗೆ ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದು ಬಹಳ ಪ್ರಯೋಜನಕಾರಿಯಾಗಿದೆ.
ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು.
ಬೆಲ್ಲ ಮತ್ತು ಸೋಂಪು ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.
ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೆ ಇದು ತುಂಬಾ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ.
ಪ್ರತಿನಿತ್ಯ ಇದನ್ನು ಸ್ವಲ್ಪ ಸ್ವಲ್ಪ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.