ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಇದರ ನೀರನ್ನು ತಪ್ಪದೆ ಕುಡಿಯಿರಿ, ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತೆ

Pic Credit: pinterest

By Preeti Bhat

12 August 2025

ಜೀರಿಗೆ ನೀರು

ಜೀರಿಗೆ ನೀರಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಆಯುರ್ವೇದದಲ್ಲಿ ಇದನ್ನು ದೈವಿಕ ಔಷಧವೆಂದು ಪರಿಗಣಿಸಲಾಗಿದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ

ಜೀರಿಗೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಾತ್ರವಲ್ಲ ಇದು ಗ್ಯಾಸ್, ಉಬ್ಬರ ಮತ್ತು ಕರುಳಿನ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಮಲಬದ್ಧತೆಯನ್ನು ನಿವಾರಿಸುತ್ತೆ

ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ನಿವಾರಿಸುವುದಕ್ಕೆ ಜೀರಿಗೆ ನೀರು ಅಮೃತವಾಗಿ ಕೆಲಸ ಮಾಡುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ.

ತೂಕ ಇಳಿಸಿಕೊಳ್ಳಲು ಸಹಕಾರಿ

ಹೆಚ್ಚುತ್ತಿರುವ ತೂಕ ಕಡಿಮೆ ಮಾಡಲು ಕೂಡ ಜೀರಿಗೆ ನೀರು ತುಂಬಾ ಪ್ರಯೋಜನಕಾರಿಯಾಗಿದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಹಸಿವನ್ನು ನಿಯಂತ್ರಿಸುತ್ತೆ

ಜೀರಿಗೆ ನೀರು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಆಗಾಗ ಕುಡಿಯುವುದರಿಂದ ಹಸಿವನ್ನು ನಿಯಂತ್ರಿಸುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಾಗುತ್ತೆ

ಜೀರಿಗೆ ನೀರನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ಮಧುಮೇಹಿಗಳಿಗೆ ಪ್ರಯೋಜನಕಾರಿ

ಜೀರಿಗೆ ನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಕೂದಲು ಉದುರುವುದನ್ನು ತಡೆಯುತ್ತೆ

ಜೀರಿಗೆ ನೀರು ಮೊಡವೆ ಮತ್ತು ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತವೆ. ಕೂದಲು ಉದುರುವಿಕೆಯನ್ನು ಕಡಿಮೆ ಮಾಡಿ, ಅವು ಸೊಂಪಾಗಿ ಬೆಳೆಯುವುದಕ್ಕೆ ಸಹಾಯ ಮಾಡುತ್ತದೆ.