Pic Credit: pinterest
By Sai Nanda
16 September 2025
ಬಹಳಷ್ಟು ಸುಲಭವಾಗಿ ಸಿಗುವ ಹಣ್ಣುಗಳಲ್ಲಿ ನಿಂಬೆ ಕೂಡ ಒಂದು. ಇದನ್ನು ಆಹಾರದ ಭಾಗವಾಗಿ ಮಾಡಿಕೊಳ್ಳುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ.
ನಿಂಬೆ ಹಣ್ಣನ್ನು ಶರಬತ್, ಉಪ್ಪಿನಕಾಯಿ ಸೇರಿದಂತೆ ವಿವಿಧ ಖಾದ್ಯಗಳಲ್ಲಿ ಬಳಸಲಾಗುತ್ತದೆ.
ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ತಾಮ್ರ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಸತು, ಫ್ಲೇವನಾಯ್ಡ್, ರಂಜಕ ಸೇರಿದಂತೆ ಫೋಷಕಾಂಶಗಳಿಂದ ಸಮೃದ್ಧವಾಗಿದೆ.
ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಸೋಂಕುಗಳಿಂದ ದೇಹವನ್ನು ರಕ್ಷಿಸುತ್ತದೆ.
ನಿಂಬೆರಸವು ಲಾಲಾರಸ ಮತ್ತು ಜೀರ್ಣಕಾರಿ ರಸಗಳ ಉತ್ಪಾದನೆ ಹೆಚ್ಚಿಸಿ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಸರಾಗಗೊಳಿಸುತ್ತದೆ.
ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ಇದು ದೇಹಕ್ಕೆ ಅಗತ್ಯವಿರುವಷ್ಟು ಕಬ್ಬಿಣವನ್ನು ಹೀರಿಕೊಳ್ಳಲು ಸಹಕಾರಿಯಾಗಿದೆ.
ರಕ್ತದೊತ್ತಡ ಮತ್ತು ಉರಿಯೂತವನ್ನು ನಿಯಂತ್ರಿಸಿ ಹೃದಯದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.
ನಿಂಬೆಯಲ್ಲಿರುವ ಸಿಟ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲುಗಳ ಅಪಾಯ ತಡೆಯುತ್ತದೆ. ಆರೋಗ್ಯಕರ ಚರ್ಮವನ್ನು ಉತ್ತೇಜಿಸಿ ಹೊಳಪನ್ನು ಹೆಚ್ಚಿಸುತ್ತದೆ