Pic Credit: pinterest
By Preeti Bhat
03 June 2025
ಕುಂಬಳಕಾಯಿ ಬೀಜಗಳನ್ನು ನಿಯಮಿತವಾಗಿ ಆಹಾರದಲ್ಲಿ ಬಳಕೆ ಮಾಡುವುದರಿಂದ ಸಾಕಷ್ಟು ರೀತಿಯ ಲಾಭಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಆದರೆ ಒಳ್ಳೆಯದು ಎಂದು ಅತಿಯಾಗಿ ಸೇವನೆ ಮಾಡಿದರೆ ಅಮೃತ ಕೂಡ ವಿಷವಾಗುತ್ತದೆ ಎಂಬ ಮಾತನ್ನು ನೀವು ಕೇಳಿರಬಹುದು.
ಈ ಬೀಜಗಳಲ್ಲಿ ನಾರಿನಾಂಶ ಅಧಿಕವಾಗಿದ್ದು ಇದನ್ನು ಅತಿಯಾಗಿ ತಿನ್ನುವುದರಿಂದ ಹೊಟ್ಟೆ ನೋವು, ಅತಿಸಾರಕ್ಕೆ ದಾರಿ ಮಾಡಿಕೊಡಬಹುದು.
ಕುಂಬಳಕಾಯಿ ಬೀಜಗಳ ಅತಿಯಾದ ಸೇವನೆ ಕೆಲವರಲ್ಲಿ ತೂಕ ಹೆಚ್ಚಳಕ್ಕೆ ಕಾರಣವಾಗಬಹುದು.
ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಕೆಲವರಲ್ಲಿ ಅಲರ್ಜಿ ಉಂಟುಮಾಡಬಹುದು.
ಇನ್ನು ಈ ಬೀಜಗಳ ಅತಿಯಾದ ಸೇವನೆ ತೀವ್ರವಾದ ಗಂಟಲು ನೋವು ಮತ್ತು ಕೆಮ್ಮಿಗೆ ಕಾರಣವಾಗಬಹುದು.
ಕಡಿಮೆ ರಕ್ತದೊತ್ತಡದಂತಹ ಸಮಸ್ಯೆಗಳಿಂದ ಈಗಾಗಲೇ ಬಳಲುತ್ತಿರುವವರು ಇವುಗಳನ್ನು ಸೇವಿಸದಂತೆ ಸೂಚಿಸಲಾಗುತ್ತದೆ.
ಕುಂಬಳಕಾಯಿ ಬೀಜಗಳನ್ನು ಸರಿಯಾದ ರೀತಿಯಲ್ಲಿ ಸೇವಿಸಿದಾಗ ಮಾತ್ರ ಸಂಪೂರ್ಣ ಪ್ರಯೋಜನಗಳು ದೊರೆಯುತ್ತವೆ.