ಶ್ವಾಸಕೋಶದ ಕ್ಯಾನ್ಸರ್  ಭಯ ಬೇಡ, ಇಷ್ಟು ಮಾಡಿ ಸಾಕು

Pic Credit: pinterest

By Preeti Bhat

5 August 2025

ಶ್ವಾಸಕೋಶದ ಕ್ಯಾನ್ಸರ್

ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಕ್ಯಾನ್ಸರ್ ಅಗ್ರಸ್ಥಾನದಲ್ಲಿದೆ. ಅದರಲ್ಲಿಯೂ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ಧೂಮಪಾನ

ಧೂಮಪಾನವು ಶ್ವಾಸಕೋಶದ ಕ್ಯಾನ್ಸರ್‌ನ ಮುಖ್ಯ ಕಾರಣವಾಗಿದೆ. ನೀವು ಕೂಡ ಧೂಮಪಾನ ಮಾಡುತ್ತಿದ್ದರೆ, ತಕ್ಷಣವೇ ಈ ಅಭ್ಯಾಸವನ್ನು ತ್ಯಜಿಸಲು ಪ್ರಯತ್ನಿಸಿ.

ಮಾಸ್ಕ್ ಧರಿಸಿ

ವಾಯುಮಾಲಿನ್ಯ ಕೂಡ ಶ್ವಾಸಕೋಶದ ಕ್ಯಾನ್ಸರ್‌ಗೆ ಒಂದು ಅಪಾಯಕಾರಿ ಅಂಶವಾಗಿದೆ. ಹಾಗಾಗಿ ಹೊರಗೆ ಹೋಗುವಾಗ ಮಾಸ್ಕ್ ಧರಿಸಿ.

ಮುನ್ನೆಚ್ಚರಿಕೆಗಳನ್ನು ಅನುಸರಿಸಿ

ಕೆಲವು ರಾಸಾಯನಿಕಗಳು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತವೆ. ಹಾಗಾಗಿ ಕೆಲಸದ ಸ್ಥಳದಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ.

ಆರೋಗ್ಯಕರ ಆಹಾರ

ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ. ನಿಮ್ಮ ಆಹಾರದಲ್ಲಿ ಹಣ್ಣು, ತರಕಾರಿ ಮತ್ತು ಧಾನ್ಯಗಳಿರಲಿ. ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು.

ಉತ್ಕರ್ಷಣ ನಿರೋಧಕಗಳು

ಉತ್ಕರ್ಷಣ ನಿರೋಧಕಗಳು, ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಆಹಾರ ಸೇವಿಸಿ. ಇವುಗಳು ಶ್ವಾಸಕೋಶದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ವ್ಯಾಯಾಮ ಮಾಡಿ

ನಿಯಮಿತವಾಗಿ ವ್ಯಾಯಾಮ ಮಾಡಿ. ಏಕೆಂದರೆ ನಿಯಮಿತ ವ್ಯಾಯಾಮ ನಿಮ್ಮ ಶ್ವಾಸಕೋಶದ ಕಾರ್ಯವನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.

ವೈದ್ಯಕೀಯ ತಪಾಸಣೆ

ಶ್ವಾಸಕೋಶದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಲು ನಿಯಮಿತ ವೈದ್ಯಕೀಯ ತಪಾಸಣೆ ಮುಖ್ಯವಾಗಿದೆ.