29-09-2023

ಭಾರತಕ್ಕೆ ಎರಡು ಅಭ್ಯಾಸ ಪಂದ್ಯ: ಯಾವಾಗ?, ಯಾರ ವಿರುದ್ಧ?

ವಿಶ್ವಕಪ್'ಗೆ ದಿನಗಣನೆ

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಂದು ಭಾರತದಲ್ಲಿ ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದೆ.

ಅಭ್ಯಾಸ ಪಂದ್ಯ

ವಿಶ್ವಕಪ್ ಆರಂಭಕ್ಕೂ ಮುನ್ನ ಇಂದಿನಿಂದ ಅಭ್ಯಾಸ ಪಂದ್ಯಗಳು ಶುರುವಾಗಲಿದೆ. ಭಾರತ ತಂಡ ಕೂಡ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.

ಭಾರತ-ಇಂಗ್ಲೆಂಡ್

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಪಂದ್ಯ ಯಾವಾಗ?

ಭಾರತ-ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯವು ಸೆ. 30 ರಂದು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ-ನೆದರ್ಲೆಂಡ್ಸ್

ಭಾರತ ತನ್ನ ಎರಡನೇ ಅಭ್ಯಾಸ ಪಂದ್ಯವನ್ನು ನೆದರ್ಲೆಂಡ್ಸ್ ವಿರದ್ಧ ಅ. 3ರಂದು ತಿರುವನಂತಪುರಂನ ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ಆಡಲಿದೆ.

ಎಷ್ಟು ಗಂಟೆಗೆ?

ಭಾರತ-ಇಂಗ್ಲೆಂಡ್ ಹಾಗೂ ಭಾರತ-ನೆದರ್ಲೆಂಡ್ಸ್ ನಡುವಣ ಎರಡೂ ಅಭ್ಯಾಸ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

ನೇರಪ್ರಸಾರ

ವಿಶ್ವಕಪ್​ನ ಎಲ್ಲ ಅಭ್ಯಾಸ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಲೈವ್ ವೀಕ್ಷಿಸಬಹುದು. ಹಾಟ್‌ಸ್ಟಾರ್​ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.

ವಿಶ್ವಕಪ್‌ನಲ್ಲಿ ಗರಿಷ್ಠ ಸರಾಸರಿ ಹೊಂದಿರುವ 10 ಬ್ಯಾಟರ್‌ಗಳು