ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಹಲವು ದಾಖಲೆಗಳನ್ನು ಮಾಡಿದ್ದಾರೆ.

ಈ ಶತಕದೊಂದಿಗೆ ಕೊಹ್ಲಿ ತಮ್ಮ ವೃತ್ತಿಜೀವನದ 75ನೇ ಶತಕ ಪೂರೈಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಶತಕ ಸಿಡಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಕೊಹ್ಲಿ (16) ಪಾತ್ರರಾಗಿದ್ದಾರೆ.

ಭಾರತದ ನೆಲದಲ್ಲಿ 4000 ಟೆಸ್ಟ್ ರನ್ ಪೂರೈಸಿದ ಸಾಧನೆಯನ್ನೂ ಕೊಹ್ಲಿ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ (8) ಪಾತ್ರರಾಗಿದ್ದಾರೆ.

ನಾಲ್ಕನೇ ಟೆಸ್ಟ್‌ನ ನಾಲ್ಕನೇ ದಿನದಂದು ಶತಕ ಸಿಡಿಸಿದ ಕೊಹ್ಲಿಗೆ ಇದು 28ನೇ ಟೆಸ್ಟ್ ಶತಕವಾಗಿದೆ.

ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 364 ಎಸೆತಗಳನ್ನು ಎದುರಿಸಿದ ಕೊಹ್ಲಿ 15 ಬೌಂಡರಿ ಸಹಿತ 186 ರನ್ ಗಳಿಸಿದರು.