ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಐದು ವಿಕೆಟ್​ಗಳಿಂದ ಮಣಿಸಿದ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದೆ.

23 September 2023

ಈ ಗೆಲುವಿನೊಂದಿಗೆ ಏಕದಿನ ಮಾದರಿಯಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿರುವ ಭಾರತ ತಂಡವು ಇದೀಗ ಮೂರೂ ಮಾದರಿಗಳಲ್ಲೂ ನಂ.1 ಸ್ಥಾನಕ್ಕೇರಿದೆ.

ಈ ಪಂದ್ಯಕ್ಕೂ ಮೊದಲು ಭಾರತ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ಬಹಳ ದಿನಗಳಿಂದ ನಂ.1 ಸ್ಥಾನದಲ್ಲಿತ್ತು.

ಆದರೀಗ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಭಾರತ, ಈ ಮೊದಲು ನಂಬರ್ 1 ಏಕದಿನ ತಂಡವೆನಿಸಿಕೊಂಡಿದ್ದ ಪಾಕಿಸ್ತಾನವನ್ನು ನಂಬರ್-1 ಸ್ಥಾನದಿಂದ ಕೆಳಗಿಳಿಸಿದೆ.

ಪ್ರಸ್ತುತ ಭಾರತವು ಟಿ20 ಮಾದರಿಯಲ್ಲಿ 264 ರೇಟಿಂಗ್‌ನೊಂದಿಗೆ 1 ನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 261 ರೇಟಿಂಗ್‌ನೊಂದಿಗೆ 2 ನೇ ಸ್ಥಾನದಲ್ಲಿದೆ.

ಟೆಸ್ಟ್‌ನಲ್ಲಿ ಭಾರತ 118 ರೇಟಿಂಗ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಕೂಡ ಅದೇ ಅಂಕಗಳನ್ನು ಹೊಂದಿದೆ ಆದರೆ ಎರಡನೇ ಸ್ಥಾನದಲ್ಲಿದೆ.

116 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತ ಏಕದಿನ ಮಾದರಿಯಲ್ಲೂ ನಂಬರ್ 1 ಸ್ಥಾನಕ್ಕೇರಿದರೆ, ಪಾಕಿಸ್ತಾನವು 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ.

India become no.1 team across all three formats