ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  3 ಏಕದಿನ ಪಂದ್ಯಗಳ ಸರಣಿ ಮಾರ್ಚ್ 17ರಿಂದ ಆರಂಭವಾಗಲಿದೆ.

ಮೊದಲ ಏಕದಿನ ಪಂದ್ಯ ಮಾರ್ಚ್ 17ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಎರಡನೇ ಏಕದಿನ ಪಂದ್ಯ ಮಾರ್ಚ್ 19ರಂದು ವಿಶಾಖಪಟ್ಟಣಂನ YSR ಸ್ಟೇಡಿಯಂನಲ್ಲಿ ನಡೆಯಲಿದೆ.

ಮೂರನೇ ಏಕದಿನ ಪಂದ್ಯ ಮಾರ್ಚ್ 22ರಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

ವೈಯಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.

ಆಸ್ಟ್ರೇಲಿಯಾ ತಂಡದ ಖಾಯಂ ನಾಯಕ ಪ್ಯಾಟ್ ಕಮಿನ್ಸ್ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಕಮಿನ್ಸ್ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಆಸೀಸ್ ತಂಡವನ್ನು ಮುನ್ನಡೆಸಲಿದ್ದಾರೆ.