ಮಹಿಳಾ ಟಿ20 ವಿಶ್ವಕಪ್​ನಲ್ಲಿ ಇಂದು ಭಾರತ- ಪಾಕ್ ಮುಖಾಮುಖಿಯಾಗುತ್ತಿವೆ.

ಇಂದಿನ ಭಾರತ- ಪಾಕ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮಹಿಳಾ ತಂಡವನ್ನು ಹರ್ಮನ್​ಪ್ರೀತ್​ ಕೌರ್ ಮುನ್ನಡೆಸುತ್ತಿದ್ದಾರೆ.

ಹಾಗೆಯೇ ಪಾಕಿಸ್ತಾನ ಮಹಿಳಾ ತಂಡವನ್ನುಬಿಸ್ಮಾ ಮರೂಫ್ ಮುನ್ನಡೆಸುತ್ತಿದ್ದಾರೆ.

ಇಂಜುರಿಯಿಂದಾಗಿ ಪಾಕ್ ವಿರುದ್ಧದ ಪಂದ್ಯದಿಂದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹೊರಗುಳಿದಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಭಾರತ- ಪಾಕಿಸ್ತಾನ ತಂಡಗಳು ಇದುವರೆಗೆ 13 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ.

ಈ 13 ಮುಖಾಮುಖಿಯಲ್ಲಿ ಭಾರತ 10 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಾಕಿಸ್ತಾನ 3 ಪಂದ್ಯಗಳಲ್ಲಿ ಗೆದ್ದಿದೆ.

ಇಂದಿನ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದ್ದು, ಯಾರು ಗೆಲುವು ಸಾಧಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.