16-09-2023

IND vs SL ಏಷ್ಯಾಕಪ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ-ಶ್ರೀಲಂಕಾ

ಏಷ್ಯಾಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ದಸುನ್ ಶನಕಾ ನೇತೃತ್ವದ ಶ್ರೀಲಂಕಾ ಮುಖಾಮುಖಿ ಆಗಲಿದೆ.

ಪಂದ್ಯ ಯಾವಾಗ?

ಭಾರತ ಹಾಗೂ ಶ್ರೀಲಂಕಾ ನಡುವಣ ಬಹುನಿರೀಕ್ಷಿತ ಏಷ್ಯಾಕಪ್ 2023 ಫೈನಲ್ ಪಂದ್ಯ ಸೆಪ್ಟೆಂಬರ್ 17 ಭಾನುವಾರದಂದು ನಡೆಯಲಿದೆ.

ಎಷ್ಟು ಗಂಟೆಗೆ?

ಭಾರತ-ಲಂಕಾ ನಡುವಣ ಏಷ್ಯಾಕಪ್ ಫೈನಲ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಪಂದ್ಯ ಎಲ್ಲಿ?

ಭಾರತ ಹಾಗೂ ಶ್ರೀಲಂಕಾ ಏಷ್ಯಾಕಪ್ 2023 ಫೈನಲ್ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಮಳೆ ಇಲ್ಲ

ಭಾರತ-ಶ್ರೀಲಂಕಾ ನಡುವಣ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಮಳೆಯ ಭೀತಿಯಿಲ್ಲ. ಹೀಗಾಗಿ ಸಂಪೂರ್ಣ ಪಂದ್ಯ ನಿರೀಕ್ಷಿಸಲಾಗಿದೆ.

ಭಾರತ ಸಾಧನೆ

ಭಾರತ ಕ್ರಿಕೆಟ್ ತಂಡ ಏಷ್ಯಾಕಪ್ ಇತಿಹಾಸದಲ್ಲಿ ಹನ್ನೊಂದನೇ ಬಾರಿಗೆ ಫೈನಲ್ ತಲುಪಿದ ಸಾಧನೆ ಮಾಡಿದೆ. ಇದುವರೆಗೆ 7 ಬಾರಿ ಪ್ರಶಸ್ತಿ ಜಯಿಸಿದೆ.

ಭಾರತಕ್ಕೆ ಸೋಲು

ಶುಕ್ರವಾರ ಬಾಂಗ್ಲಾದೇಶ ವಿರುದ್ಧ ನಡೆದ ಸೂಪರ್-4ನ ಕೊನೆಯ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಸೋಲು ಕಂಡಿತು.

ಭಾರತ-ಬಾಂಗ್ಲಾ ಪಂದ್ಯದಲ್ಲಿ ನಿರ್ಮಾಣವಾದ ದಾಖಲೆಗಳು ನೋಡಿ