Author: Ganapathi Sharma

24 March 2025

ದೇಶ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಯ್ತು ಡಿಕೆ ಶಿವಕುಮಾರ್ ಈ ಹೇಳಿಕೆ

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ವಿಚಾರವಾಗಿ ಮಾತನಾಡುವಾಗ ಡಿಸಿಎಂ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಉಲ್ಲೇಖಿಸಿದ್ದಾರೆ.

ಕೆಲವು ವಿಚಾರಗಳು ಕೋರ್ಟ್​ನಲ್ಲಿವೆ. ಅನಿವಾರ್ಯವಾದರೆ ಸಂವಿಧಾನದಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಹೇಳಿಕೆ ಮುಂದಿಟ್ಟುಕೊಂಡು ಬಿಜೆಪಿ ಸಂಸತ್ತಿನಲ್ಲೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ, ಸಂವಿಧಾನ ತಿದ್ದುಪಡಿ ಎಂಬ ಅರ್ಥದಲ್ಲಿ ತಾವು ಹೇಳಿದ್ದಾಗಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಸರ್ಕಾರ ಸಂವಿಧಾನದ ನಿಯಮ ಉಲ್ಲಂಘಿಸಿ ಮಸೂದೆ ಜಾರಿಗೊಳಿಸಿದೆ ಎಂದು ರಾಜ್ಯಸಭೆಯಲ್ಲಿ ನಡ್ಡಾ ಆರೋಪಿಸಿದ್ದಾರೆ.

ಈ ಮಧ್ಯೆ, ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂವಿಧಾನದ ಪರಿಜ್ಞಾನ ಇದೆ, ಬಿಜೆಪಿಯವರು ಮಿಸ್​ಲೀಡ್ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.