ತಾವು ಸ್ಥಾಪಿಸಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿಪರ ತರಬೇತಿ ನೀಡುವ ಉದ್ದೇಶದಿಂದ ಬೆಂಕಿಪೆಟ್ಟಿಗೆ ಕಾರ್ಖಾನೆ, ಪೆನ್ಸಿಲ್ ಕಾರ್ಖಾನೆ, ಉಡುಗೆ ಫ್ಯಾಕ್ಟರಿ, ಪ್ರಿಂಟಿಂಗ್ ಕ್ಲಾಸುಗಳನ್ನೂ ಪ್ರಾರಂಭಿಸಿದರು.
1905ರಿಂದಲೂ ಕರ್ನಾಟಕ ಏಕೀಕರಣಕ್ಕೆ ದುಡಿದು, 1956 ರ ನವೆಂಬರ್ 1 ರಂದು ಏಕೀಕರಣ ಆದದ್ದನ್ನು ನೋಡಿ ಸಂತೋಷಪಟ್ಟರು. ಬಳಿಕ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕರ್ನಾಟಕದ ಕುಲಪುರೋಹಿತ ಎಂಬ ಹೆಸರು ಪಡೆದರು.