08 April 2025

Author: Vivek Biradar

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೂರು ಭಾಗದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ.

ಕಲಬುರಗಿ ಜಿಲ್ಲೆಯ ಹಲವಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಬಿರುಗಾಳಿಗೆ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ  ವಿದ್ಯುತ್ ಕಂಬಗಳು‌ ಧರೆಗೆ ಉರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಗಾಳಿ ಮಳೆಯಿಂದ ಹಲವೆಡೆ ಮನೆಗಳ ಮೇಲೆ ಬೃಹತ್ ಗಾತ್ರದ ಮರಗಳು ಉರುಳಿ ಬಿದ್ದಿವೆ.

ಕಳೆದ 24 ಗಂಟೆಗಳಲ್ಲಿ  ☔️ ಬೆಳಗಾವಿ  ಜಿಲ್ಲೆಯ ಕೆ ಕೆ ಕೊಪ್ಪದಲ್ಲಿ ಅತ್ಯಧಿಕ 43 ಮಿಮೀ ಮಳೆಯಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಗಳಲ್ಲಿ ಬುಧವಾರ (ಏ.09) ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರಗಳಲ್ಲಿ ಬುಧವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕರ್ನಾಟಕದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಧವಾರ ವರುಣ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ಮಂಗಳವಾರ ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ, ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆ ಬೀಸಿದೆ.