ಆರ್ಟಿಕಲ್ 370ಸುಪ್ರೀಂಕೋರ್ಟ್ ಆದೇಶ ಸ್ವಾಗತಿಸಿದ ದಳಪತಿಹೆಚ್ಡಿ ದೇವೇಗೌಡ
11 December 2023
Author: Rakesh Nayak Manchi
ಆರ್ಟಿಕಲ್ 370 ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ಆದೇಶವನ್ನು ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಸ್ವಾಗತಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಆರ್ಟಿಕಲ್ 370 ಮೂಲಕ ಕಾಶ್ಮೀರಕ್ಕೆ ವಿಶೇಷ ಸವಲತ್ತು ಕಲ್ಪಿಸಲಾಗಿತ್ತು. ಅದನ್ನು ಲೋಕಸಭೆ, ರಾಜ್ಯಸಭೆಯಲ್ಲಿ ತಿದ್ದುಪಡಿ ಮಾಡುವ ಮುಖೇನಾ ಆ ಸವಲತ್ತು ರದ್ದು ಮಾಡಿದ್ದರು ಎಂದರು.
ಆ ಮೂಲಕ ಬೇರೆ ರಾಜ್ಯಗಳಿಗೂ, ಅನ್ವಯ ಆಗುವ ಎಲ್ಲ ಕಾನೂನು, ಅದು ಜಮ್ಮು, ಕಾಶ್ಮೀರಕ್ಕೂ ಅನ್ವಯವಾಗುತ್ತದೆ. ಐದು ಜನ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ತೀರ್ಪು ಕೊಟ್ಟಿದ್ದಾರೆ ನಾನು ಸ್ವಾಗತಿಸುತ್ತೇನೆ ಎಂದರು.
ಮುಂಬರುವ ಚುನಾವಣೆಯಲ್ಲಿ INDIA ಒಂದು ಕಡೆ, ಇನ್ನೊಂದು ಕಡೆ ಎನ್‌ಡಿಎ ಇದೆ. ನಾವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಈ ರಾಷ್ಟ್ರದ ಮಹಾಜನತೆ INDIA ಗೆ ತೀರ್ಪು ಕೊಡುತ್ತಾರೋ, ಎನ್‌ಡಿಎ ಮೈತ್ರಿಕೂಟಕ್ಕೆ ತೀರ್ಪು ಕೊಡ್ತಾರೋ ಕಾದು ನೋಡಬೇಕು ಎಂದರು.
ವಿಶ್ವಮಟ್ಟದಲ್ಲಿ ಮೋದಿ ಎತ್ತರಕ್ಕೆ ಬೆಳೆದಿದ್ದಾರೆ. ಐದು ರಾಜ್ಯಗಳ ಚುನಾವಣೆ ಫಲಿತಾಂಶ ಗಮನಿಸಿದರೆ ಜನರ ಮನಸ್ಸಿನಲ್ಲಿ ಬಿಜೆಪಿಗೆ ಸ್ವಾಭಾವಿಕವಾಗಿ ಹೆಚ್ಚಿ ಶಕ್ತಿ ಕೊಟ್ಟಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ದೇವೇಗೌಡರು ಹಾಸನದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಹಾಲಿ ಸಂಸದರು ಮುಂದುವರಿಯುತ್ತಾರೆ ಎಂದರು. ಆ ಮೂಲಕ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರೊಬ್ಬರು ಕೇಂದ್ರದ ಬಿಜೆಪಿ ನಾಯಕರ ಜೊತೆ ಮಾತುಕತೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ದಳಪತಿ, ನಾನು ಅದಕ್ಕೆಲ್ಲಾ ಉತ್ತರ ಕೊಡಲ್ಲ, ನನ್ನ ಲೆವೆಲ್‌ಗೆ ಅಲ್ಲ ಎಂದರು.