ಕರ್ನಾಟಕ ರತ್ನ' ಪ್ರಶಸ್ತಿಯನ್ನು ಮೊದಲ ಬಾರಿಗೆ 1992 ರಲ್ಲಿ ನೀಡಲಾಯಿತು. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 

Oct-28-2023

ಕನ್ನಡ ರಾಜ್ಯೋತ್ಸವದ ಸಂದಂರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಪಡೆಯುವವರಿಗೆ 50 ಗ್ರಾಂ ಚಿನ್ನದ ಪದಕ, ನೆನಪಿನ ಕಾಣಿಕೆ ನೀಡಿ, ಶಾಲನ್ನು ಹೊದಿಸಿ ಗೌರವಿಸಲಾಗುತ್ತದೆ. 

Oct-28-2023

ಮೊದಲ ಬಾರಿಗೆ ಕುವೆಂಪು ಅವರಿಗೆ 1992 ರಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಯಿತು.  

ಕುವೆಂಪು

ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕಾಗಿ 1992 ರಲ್ಲಿ ಡಾ. ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವಿಸಲಾಯಿತು.  

ಡಾ. ರಾಜ್‌ಕುಮಾರ್‌ 

ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಸ್‌.ನಿಜಲಿಂಗಪ್ಪ  ಅವರಿಗೆ 1999ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಯಿತು.

ಎಸ್‌.ನಿಜಲಿಂಗಪ್ಪ 

ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರುತಿಸಿ 2000ದರಲ್ಲಿ ಸಿ.ಎನ್‌.ಆರ್.ರಾವ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಯಿತು.

ಸಿ.ಎನ್‌.ಆರ್.ರಾವ್

ವೈದ್ಯಕೀಯ  ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2001ರಲ್ಲಿ ದೇವಿಪ್ರಸಾದ್ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೇವಿಪ್ರಸಾದ್ ಶೆಟ್ಟಿ

ಸಂಗೀತ ಲೋಕದಲ್ಲಿ ಮಾಡಿದ ಸಾಧನೆಗಾಗಿ 2005ರಲ್ಲಿ ಭೀಮಸೇನ ಜೋಷಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಯಿತು.

ಭೀಮಸೇನ ಜೋಷಿ 

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮಿಗಳಿಗೆ 2007 ರಲ್ಲಿ ಸಾಮಾಜಿಕ ಸೇವೆ ಸಾಧನೆ ಮಾಡಿದ್ದಕ್ಕಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಯಿತು.

ಶ್ರೀ ಶಿವಕುಮಾರ ಸ್ವಾಮೀಗಳು 

ದೇ. ಜವರೇಗೌಡ ಅವರಿಗೆ 2008 ರಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕಾಗಿ ಕರ್ನಾಟಕ ರತ್ನ ಕೊಡಲಾಯಿತು.

 ದೇ. ಜವರೇಗೌಡ 

2009ರಲ್ಲಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಸಾಮಾಜಿಕ ಸೇವೆ ಮಾಡಿದ್ದಕ್ಕಾಗಿ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಯಿತು.

ಡಿ. ವೀರೇಂದ್ರ ಹೆಗ್ಗಡೆ

ಸಿನಿಮಾ ಹಾಗೂ ಸಾಮಾಜಿಕ ಸೇವೆ ಮೂಲಕ ಸಾಧನೆ ಮಾಡಿದ ಪುನೀತ್ ರಾಜ್‌ಕುಮಾರ್ ಅವರಿಗೆ 2021ರಲ್ಲಿ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.

ದಿ. ಪುನೀತ್ ರಾಜ್‌ಕುಮಾರ್