ಕರ್ನಾಟಕದ ಹಲವೆಡೆ 1 ವಾರ ಮಳೆ: ಬೆಂಗಳೂರಿನಲ್ಲಿ ಎಷ್ಟು ದಿನ?

19 May 2025

Author: Gangadhar Saboji

ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ. ಆ ಮೂಲಕ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. 

ಒಂದು ವಾರ ಮಳೆ ಸಾಧ್ಯತೆ 

ಕರಾವಳಿ ಜಿಲ್ಲೆಗಳಾದ ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಆರೆಂಜ್ ಅಲರ್ಟ್, ನಂತರ ನಾಲ್ಕು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್ ಅಲರ್ಟ್

ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಸಾಧ್ಯತೆ ಇದೆ.

ಎರಡು ದಿನ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಬಳ್ಳಾರಿ, ಹಾಸನ, ಕೊಡಗು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್ ಅಲರ್ಟ್

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.  

ಯಲ್ಲೋ ಅಲರ್ಟ್

ಹವಾಮಾನ ಇಲಾಖೆ ಜೋರು ಮಳೆ ಜೊತೆ ಗುಡುಗು ಸಿಡಿಲಿನ ಎಚ್ಚರಿಕೆ ಕೂಡ ನೀಡಿದೆ. 

ಎಚ್ಚರಿಕೆ 

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಗೋಡೆ ಕುಸಿದು ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಮಹಿಳೆ ಸಾವು

ಮಳೆ ಆರ್ಭಟಕ್ಕೆ ರಾಜ್ಯದ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. 

 ಅವಾಂತರಗಳು