Ganapathi Sharma

06 Jan 2025

ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.

ದಿನದ ಆರಂಭದಲ್ಲಿ ಬಸ್ ಸಂಚಾರ ಇತ್ತಾದರೂ ನಂತರ ಪ್ರತಿಭಟನಾಕಾರರು ಬಸ್​ಗಳ ಸಂಚಾರಕ್ಕೆ ಅಡ್ಡಿಪಡಿಸಿದರು.

ಬಸ್ ಸಂಚಾರ ಸ್ಥಗಿತ ಹಿನ್ನೆಲೆ ಬಸ್ ನಿಲ್ದಾಣದಲ್ಲೇ ಪ್ರಯಾಣಿಕರು ಬಾಕಿಯಾಗುವಂತಾಯಿತು.

ಪ್ರತಿಭಟನಾಕಾರರು ಮತ್ತು ಪ್ರಯಾಣಿಕರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಕಾಲೇಜು ಹಾಗೂ ಮನೆಗೆ ತೆರಳಲು ವಿದ್ಯಾರ್ಥಿಗಳು ಪರದಾಡಿದರು.

ಕೆಪಿಸಿಸಿ ವಕ್ತಾರ ಲಕ್ಷ್ಮಣ್ ನೇತೃತ್ವದಲ್ಲಿ ಆರ್​​ಎಸ್ಎಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಲಾಯಿತು.

ಮೈಸೂರಿನ ವಿವಿಧ ಕಡೆಗಳಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಹಲವೆಡೆ ಪೊಲೀಸರು ಹಾಗೂ ಪ್ರತಿಭಟನಾನಿರತರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಮೈಸೂರು ಮಾತ್ರವಲ್ಲದೆ ಮಂಡ್ಯದಲ್ಲಿಯೂ ಬಂದ್​ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

‘ಚಡ್ಡಿ ಹರಿದೋಗಿದೆ’; ಹನುಮಂತಗೆ ಶುರುವಾಯ್ತು ಟೆನ್ಷನ್