ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಟಿ20 ವಿಶ್ವಕಪ್ನಲ್ಲಿ ಕೆ ಎಲ್ ರಾಹುಲ್ ಹೇಳಿಕೊಳ್ಳುವಂತಹ ಒಂದೇ ಒಂದು ಪ್ರದರ್ಶನ ನೀಡಲಿಲ್ಲ.
ಹೀಗಾಗಿ ರಾಹುಲ್ರನ್ನು ತಂಡದಿಂದ ಕೈಬಿಡಬೇಕು ಎಂದು ಅಭಿಮಾನಿಗಳು ಬಿಸಿಸಿಐ ಎದುರು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.
ಹೀಗಾಗಿ ಸ್ನೇಹಿತರೊಂದಿಗೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಭೇಟಿ ನೀಡಿದ ರಾಹುಲ್ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಸದ್ಯ ಟೀಂ ಇಂಡಿಯಾದಿಂದ ಬ್ರೇಕ್ ತೆಗೆದುಕೊಂಡಿರುವ ರಾಹುಲ್ ಬಾಂಗ್ಲಾದೇಶ ವಿರುದ್ಧದ ಸರಣಿಗೆ ತಂಡಕ್ಕೆ ಎಂಟ್ರಿಕೊಡಲಿದ್ದಾರೆ