Pic Credit: pinterest
By Malashree Anchan
28 May 2025
ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆಯೂ ಅತೀ ಅವಶ್ಯಕ. ಹಾಗಾಗಿ ಈ ಕೆಲವೊಂದು ಆಹಾರಗಳನ್ನು ಸೇವನೆ ಮಾಡಿ, ರಾತ್ರಿ ಚೆನ್ನಾಗಿ ನಿದ್ರೆ ಪಡೆಯಿರಿ.
ಬಾದಾಮಿಯಲ್ಲಿ ಮೆಲಟೋನಿನ್ ಇರುತ್ತದೆ. ಮೆಲಟೋನಿನ್ ನಿಮ್ಮ ನಿದ್ರೆಯ ಮಾದರಿಯನ್ನು ಸುಧಾರಿಸುತ್ತದೆ. ಇದು ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ.
ಡಾರ್ಕ್ ಚಾಕೊಲೇಟ್‌ನಲ್ಲಿ ಸಿರೊಟೋನಿನ್ ಇದೆ. ಅದು ಮನಸ್ಸನ್ನು ಶಾಂತಗೊಳಿಸುತ್ತದೆ, ಮತ್ತು ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ.
ಈ ಹಣ್ಣು ಪೊಟ್ಯಾಸಿಯಮ್, ಫೋಲೇಟ್ ಜೊತೆಗೆ ವಿಟಮಿನ್ ಸಿ ಮತ್ತು ಇ ಅನ್ನು ಹೊಂದಿದ್ದು, ಇದು ನಿದ್ರೆಯನ್ನು ಸುಧಾರಿಸಲು ಸಹಕಾರಿಯಾಗಿದೆ.
ಚೆರ್ರಿ ಹಣ್ಣಿನಲ್ಲಿ ಮೆಲಟೋನಿನ್ ಅಂಶವು ಸಮೃದ್ಧವಾಗಿದೆ. ಇದು ನಿದ್ರೆಯನ್ನು ಉತ್ತೇಜಿಸುವ ಹಾರ್ಮೋನ್ ಆಗಿದೆ. ಈ ಹಣ್ಣನ್ನು ತಿನ್ನುವುದರಿಂದ ರಾತ್ರಿ ಉತ್ತಮ ನಿದ್ರೆ ಬರುತ್ತದೆ.
ಇದರಲ್ಲಿರುವ ಟ್ರಿಪ್ಟೋಫಾನ್, ಮೆಗ್ನೇಸಿಯಮ್ ಮತ್ತು ಸತುವು ಮೆಲಟೋನಿನ್ ಉತ್ಪಾದನೆಯನ್ನು ಹೆಚ್ಚಿಸಲು, ಉತ್ತಮ ನಿದ್ರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ಮೆಗ್ನೇಸಿಯಮ್, ಪೊಟ್ಯಾಸಿಯಮ್‌ನಿಂದ ಸಮೃದ್ಧವಾಗಿರುವ ಬಾಳೆಹಣ್ಣನ್ನು ರಾತ್ರಿ ತಿನ್ನುವುದರಿಂದಲೂ ಉತ್ತಮ ನಿದ್ರೆ ಪಡೆಯಬಹುದು.
ಹಾಲಿನಲ್ಲಿ ಟ್ರಿಪ್ಟೊಫಾನ್ ಮತ್ತು ಮೆಲಟೋನಿನ್ ಅಂಶವಿದ್ದು, ಇದು ನಿದ್ರೆಯನ್ನು ಸುಧಾರಿಸಲು ಸಹಕಾರಿಯಾಗಿದೆ.