Pic Credit: pinterest
By Malashree anchan
01 September 2025
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ರಸ ಹಾಕಿ ಕುಡಿಯಿರಿ. ಇದು ಚರ್ಮದ ಕಾಂತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಗ್ರೀನ್ ಟೀ ತೂಕ ಇಳಿಕೆಗೆ ಮಾತ್ರವಲ್ಲದೆ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹ ತುಂಬಾನೇ ಸಹಕಾರಿಯಾಗಿದೆ.
ಎಳನೀರು ದೇಹವನ್ನು ರಿಫ್ರೆಶ್ ಮಾಡುವುದಲ್ಲದೆ, ಚರ್ಮಕ್ಕೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯಿರಿ.
ಅಲೋವೆರಾ ರಸದಲ್ಲಿರುವ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆಳವಾಗಿ ಪೋಷಿಸಿ, ಮೃದು ಮತ್ತು ಹೊಳೆಯುವಂತೆ ಮಾಡುತ್ತದೆ.
ಕಲ್ಲಂಗಡಿ ರಸವು ದೇಹವನ್ನು ಹೈಡ್ರೇಟ್ ಮಾಡುವುದಲ್ಲದೆ, ಇದರಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ಹೊಳಪನ್ನು ನೀಡುತ್ತದೆ.
ನೆಲ್ಲಿಕಾಯಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಹಾಗಾಗಿ ಪ್ರತಿನಿತ್ಯ ಇದರ ರಸವನ್ನು ಕುಡಿಯಿರಿ.
ಬೀಟ್ರೂಟ್ ಮತ್ತು ಕ್ಯಾರೆಟ್ ಜ್ಯೂಸ್ ಮುಖದ ಕಲೆಗಳನ್ನು ಕಡಿಮೆ ಮಾಡಿ, ತ್ವಚೆಯನ್ನು ಹೊಳೆಯುವಂತೆ ಮಾಡತ್ತದೆ. ಹಾಗಾಗಿ ಬೆಳಗ್ಗೆ ತಪ್ಪದೆ ಈ ಜ್ಯೂಸ್ ಕುಡಿಯಿರಿ.
ತಾಜಾ ದಾಳಿಂಬೆ ರಸವನ್ನು ಕುಡಿಯುವುದರಿಂದ ಮುಖದ ಹೊಳಪನ್ನು ನೈಸರ್ಗಿಕ ಹೊಳಪನ್ನು ಹೆಚ್ಚಿಸಬಹುದು.