Author: Preeti Bhat Gunavanthe
ನೆಲ್ಲಿಕಾಯಿ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ?
01 ಜನವರಿ 2024
ಆಮ್ಲಾ ಅಥವಾ ನೆಲ್ಲಿಕಾಯಿಯನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ.
ಇದು ಕಹಿ, ಸಿಹಿ, ಕಟು, ಆಸ್ಟ್ರಿಂಜೆಂಟ್ ಮತ್ತು ಹುಳಿ ಎಂಬ ಐದು ರುಚಿಗಳನ್ನು ಹೊಂದಿದೆ.
ಇದು ಆಯುರ್ವೇದದ ಪ್ರಕಾರ ವಾತ, ಪಿತ್ತ ಮತ್ತು ಕಫ ಈ ಮೂರನ್ನು ನಿವಾರಣೆ ಮಾಡುತ್ತದೆ.
ಇದು ಹೆಚ್ಚಿನ ಮಟ್ಟದ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿರುತ್ತದೆ.
ಮಧುಮೇಹಿಗಳಿಗೂ ಉತ್ತಮವಾದ ಆಹಾರದ ಆಯ್ಕೆಯಾಗಿದೆ. ಹಾಗಾಗಿ ಮಧುಮೇಹ ಹೊಂದಿರುವವರು ತಮ್ಮ ಆಹಾರದಲ್ಲಿ ಇದನ್ನು ಬಳಸಿಕೊಳ್ಳಬಹುದು.
ಕೊಲೆಸ್ಟ್ರಾಲ್ ಕಡಿಮೆ ಮಾಡಲು ಆಮ್ಲಾ ಸಹಾಯ ಮಾಡುತ್ತದೆ. ಇದರಿಂದಾಗಿ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಅಸಿಡಿಟಿ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ. ಹೊಟ್ಟೆ ಮತ್ತು ಎದೆ ಉರಿ ಸಮಸ್ಯೆ ಇರುವವರು ತಪ್ಪದೆ ನೆಲ್ಲಿಕಾಯಿ ರಸವನ್ನು ಸೇವಿಸಬೇಕು.
ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಆಸ್ಟಿಯೊಪೊರೋಸಿಸ್, ಸಂಧಿವಾತ ಮತ್ತು ಕೀಲು ನೋವಿನಿಂದಲೂ ಪರಿಹಾರ ಕಾಣಬಹುದಾಗಿದೆ.
Next: ಖಿನ್ನತೆಯಿಂದ ಪಾರಾಗಲು ಈ ಅಭ್ಯಾಸಗಳನ್ನು ಬಿಟ್ಟುಬಿಡಿ