ನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿ.
ಸತ್ತಂತೆ ಬದುಕುವುದಕ್ಕಿಂತ, ಸತ್ತು ಬದುಕುವುದು ಲೇಸು
ಬಹು ಜನರು ಹೇಳಿದ ಮಾತ್ರಕ್ಕೆ ಸುಳ್ಳು ಸತ್ಯವಾಗುವುದಿಲ್ಲ
ಕೋಟಿ ಧನವಿದ್ದರೂ ಪಟ್ಟಣವು ಗೋಳು, ಕಾಸಿಲ್ಲದಿದ್ದರೂ ಸುಖ ಹಳ್ಳಿ ಬಾಳು
ಕಣ್ಣಿನ ಕಾಂತಿ, ಮನಸ್ಸಿನ ಶಾಂತಿ, ಮುಖದ ತೇಜಸ್ಸು, ಆತ್ಮದ ಓಜಸ್ಸು, ದೇಹದ ಉಲ್ಲಾಸ, ಹೃದಯದ ಉತ್ಸಾಹ ಎಲ್ಲವನ್ನೂ ಕಳೆದುಕೊಂಡು ಜೀವಶವಗಳಂತೆ ಇರುವವರಿಂದ ನಾಡಿಗಾದರೂ ಜನರಿಗಾದರೂ ಏನು ಉಪಯೋಗವಾದೀತು?
ಇಲ್ಲಿ ಯಾರು ಮುಖ್ಯರಲ್ಲಯಾರು ಅಮುಖ್ಯರಲ್ಲಯಾವುದೂ ಯಃಕಶ್ಚಿತವಲ್ಲ