

Pic Credit: pinterest
By Malashree anchan
14 July 2025

ಯುದ್ಧಕ್ಕೆ ಸಂಬಂಧಿಸಿದ ಫೋಟೋಗಳನ್ನು ಮನೆಯಲ್ಲಿ ಇಡಲೇಬಾರದು. ಇದು ಮನೆಯಲ್ಲಿ ಅಶಾಂತಿ ಮತ್ತು ಅಪಶ್ರುತಿಯ ಪರಿಸ್ಥಿತಿಯನ್ನು ಉಂಟು ಮಾಡುತ್ತದೆ.

ತಾಜ್ ಮಹಲ್ ಫೋಟೋವನ್ನು ಮನೆಯಲ್ಲಿ ಇಡಲೇಬಾರದು. ಶಾಸ್ತ್ರಗಳ ಪ್ರಕಾರ, ಸಮಾಧಿಯ ಚಿತ್ರವನ್ನು ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ.

ಆಕ್ರಮಣಕಾರಿ ಪ್ರಾಣಿಗಳ ಚಿತ್ರವನ್ನು ಸಹ ಮನೆ ಗೋಡೆಯ ಮೇಲೆ ನೇತು ಹಾಕಬಾರದು. ಇವುಗಳು ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ.
ನಿಮ್ಮ ಮನೆಯ ಗೋಡೆಯ ಮೇಲೆ ಮಗು ಅಳುವ ಫೋಟೊವನ್ನು ಎಂದಿಗೂ ನೇತು ಹಾಕಬೇಡಿ. ಹೀಗೆ ಮಾಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.
ಇಂತಹ ಫೋಟೋಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ಅಶಾಂತಿಯನ್ನು ಉಂಟು ಮಾಡುತ್ತದೆ. ಇದು ಮನೆಯ ಆರ್ಥಿಕ ಪರಿಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ ಈ ಫೋಟೋಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಲ್ಲ. ಏಕೆಂದರೆ ಇದರಿಂದ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತದೆ.
ಮಸುಕಾದ, ಗಾಜು ಒಡೆದು ಹೋದ ಫೋಟೋಗಳನ್ನು ಸಹ ಎಂದಿಗೂ ಮನೆಯಲ್ಲಿ ಇಡಬಾರದು. ಇದು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಬಹುದು.
ಮನೆಯಲ್ಲಿ ಸೂರ್ಯ ಮುಳುಗುವ ಚಿತ್ರವನ್ನು ಸಹ ಇಡಬಾರದಂತೆ. ಇದನ್ನು ನಕಾರಾತ್ಮಕತೆಯ ಸಂಕೇತ ಎಂದು ಪರಿಗಣಿಸಲಾಗುತ್ತದೆ.