26-01-2024
ಟೆಸ್ಟ್ ಪಂದ್ಯದ ಒಂದು ಓವರ್‌ನಲ್ಲಿ ಅತಿ ಹೆಚ್ಚು ರನ್ ನೀಡಿದ ಬೌಲರ್ ಯಾರು ಗೊತ್ತಾ?
Author: ಪೃಥ್ವಿ ಶಂಕರ
2022 ರಲ್ಲಿ ಭಾರತ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ಸ್ಟುವರ್ಟ್ ಬ್ರಾಡ್ ಒಂದು ಓವರ್‌ನಲ್ಲಿ ಬರೋಬ್ಬರಿ 35 ರನ್ ನೀಡಿದ್ದರು.
ವೆಸ್ಟ್ ಇಂಡೀಸ್ ವಿರುದ್ಧ ಒಂದೇ ಓವರ್‌ನಲ್ಲಿ ದಕ್ಷಿಣ ಆಫ್ರಿಕಾದ ರಾಬಿನ್ ಪೀಟರ್ಸನ್ 28 ರನ್ ನೀಡಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ಜೇಮ್ಸ್ ಆಂಡರ್ಸನ್ ಒಂದು ಓವರ್‌ನಲ್ಲಿ 28 ರನ್ ಬಿಟ್ಟುಕೊಟ್ಟಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ಜೋ ರೂಟ್ ಒಂದು ಓವರ್‌ನಲ್ಲಿ 28 ರನ್ ನೀಡಿ ದುಬಾರಿಯಾಗಿದ್ದರು.
ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಹರ್ಭಜನ್ ಸಿಂಗ್ ಒಂದು ಓವರ್‌ನಲ್ಲಿ 27 ರನ್ ನೀಡಿದ್ದರು.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಯೂನಿಸ್ ಖಾನ್ ಒಂದು ಓವರ್‌ನಲ್ಲಿ 26 ರನ್ ಬಿಟ್ಟುಕೊಟ್ಟಿದ್ದರು.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಡ್ಯಾನಿಶ್ ಕನೇರಿಯಾ ಒಂದು ಓವರ್‌ನಲ್ಲಿ 26 ರನ್ ನೀಡಿ ದುಬಾರಿಯಾಗಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪಾಲ್ ಹ್ಯಾರಿಸ್ ಒಂದು ಓವರ್‌ನಲ್ಲಿ 26 ರನ್ ನೀಡಿ ದುಬಾರಿಯಾಗಿದ್ದರು.
NEXT: ಅತಿ ಹೆಚ್ಚು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಆಟಗಾರರಲ್ಲಿ ಕಿಂಗ್ ಕೊಹ್ಲಿ ನಂ.1