ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಅವಿಸ್ಮರಣೀಯ ಕ್ಷಣಗಳಿವು
11 August 2024
Pic credit: Google
ಪೃಥ್ವಿ ಶಂಕರ
Pic credit: Google
\ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ಕಂಚು ಗೆಲ್ಲುವ ಮೂಲಕ ಭಾರತದ ಪದಕದ ಖಾತೆಯನ್ನು ತೆರೆದರು. ಇದರೊಂದಿಗೆ ಶೂಟಿಂಗ್‌ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
Pic credit: Google
ಇದಲ್ಲದೆ ಮನು ಭಾಕರ್ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಪದಕ ಗೆದ್ದಿದ್ದಾರೆ. ಇದರೊಂದಿಗೆ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದರು ಮತ್ತು ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು
Pic credit: Google
ಭಾರತದ ಶೂಟರ್‌ಗಳು ಈ ಹಿಂದೆ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಆದರೆ ಮೊದಲ ಬಾರಿಗೆ ಶೂಟಿಂಗ್‌ನ 50 ಮೀಟರ್ ರೈಫಲ್ ತ್ರೀ ಪೊಸಿಷನ್‌ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.
Pic credit: Google
ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ, ಬ್ಯಾಡ್ಮಿಂಟನ್‌ನ ನಾಕೌಟ್ ಸ್ಪರ್ಧೆಯಲ್ಲಿ ಇಬ್ಬರು ಭಾರತೀಯರು ಪರಸ್ಪರ ಮುಖಾಮುಖಿಯಾಗಿದ್ದರು. ಭಾರತದ ಲಕ್ಷ್ಯ ಸೇನ್ ಮತ್ತು ಎಚ್‌ಎಸ್ ಪ್ರಣಯ್ 16 ರ ಘಟ್ಟದಲ್ಲಿ ಪರಸ್ಪರ ವಿರುದ್ಧ ಆಡಿದರು. ಈ ಪಂದ್ಯದಲ್ಲಿ ಲಕ್ಷ್ಯ ಸೇನ್ ಗೆಲುವು ಸಾಧಿಸಿದ್ದರು.
Pic credit: Google
1972 ರಿಂದ ಭಾರತ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಲು ವಿಫಲವಾಗಿತ್ತು. ಆದರೆ 52 ವರ್ಷಗಳ ನಂತರ ಮೊದಲ ಬಾರಿಗೆ ಗ್ರೂಪ್ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು 3-2 ಗೋಲುಗಳಿಂದ ಸೋಲಿಸಿತು.
Pic credit: Google
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನಿಕಾ ಬಾತ್ರಾ ಅದ್ಭುತ ಪ್ರದರ್ಶನ ನೀಡಿದ್ದರು. ಅವರು ಮಹಿಳೆಯರ ಟೇಬಲ್ ಟೆನಿಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎನಿಸಿಕೊಂಡರು.
Pic credit: Google
ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ ಆರ್ಚರಿಯಲ್ಲಿ ಪದಕದ ಪಂದ್ಯವನ್ನು ಆಡಿತು. ಮಿಶ್ರ ಸ್ಪರ್ಧೆಯಲ್ಲಿ ಧೀರಜ್ ಬೊಮ್ಮದೇವರ ಮತ್ತು ಅಂಕಿತಾ ಭಕತ್ ಅಮೆರಿಕ ವಿರುದ್ಧ ಕಂಚಿನ ಪದಕ ಪಂದ್ಯವನ್ನು ಆಡಿದ್ದರು. ಆದರೆ ಈ ಪಂದ್ಯದಲ್ಲಿ ಅವರು ಸೋಲನ್ನು ಎದುರಿಸಬೇಕಾಯಿತು.