ಈ ವರ್ಷ ಅಧಿಕ ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿ; ಜೈಸ್ವಾಲ್ಗೆ ಅಗ್ರಸ್ಥಾನ
09 August 2024
Pic credit: Google
ಪೃಥ್ವಿ ಶಂಕರ
Pic credit: Google
ಭಾರತದ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ 2024 ರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಯಶಸ್ವಿ ಈ ವರ್ಷ ಗರಿಷ್ಠ 42 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
Pic credit: Google
ಭಾರತದ ನಾಯಕ ರೋಹಿತ್ ಶರ್ಮಾ ಈ ವರ್ಷ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ಹಿಟ್‌ಮ್ಯಾನ್ 2024ರಲ್ಲಿ 38 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.
Pic credit: Google
ಹಾಂಕಾಂಗ್ ಬ್ಯಾಟ್ಸ್‌ಮನ್ ಬಾಬರ್ ಹಯಾತ್ ಈ ವರ್ಷ 36 ಸಿಕ್ಸರ್ ಸಿಕ್ಸರ್‌ಗಳನ್ನು ಬಾರಿಸಿದ್ದು, ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ.
Pic credit: Google
ಈ ವರ್ಷ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಫ್ಘಾನ್ ಬ್ಯಾಟ್ಸ್‌ಮನ್ ರಹಮಾನುಲ್ಲಾ ಗುರ್ಬಾಜ್ ನಾಲ್ಕನೇ ಸ್ಥಾನದಲ್ಲಿದ್ದು, ಈ ವರ್ಷ ಅವರ ಹೆಸರಿನಲ್ಲಿ 36 ಸಿಕ್ಸರ್‌ಗಳಿವೆ.
Pic credit: Google
ಜಪಾನ್‌ನ ಕೆಂಡಾಲ್ ಕಡೋವಾಕಿ-ಫ್ಲೆಮಿಂಗ್ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ 5 ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದು, 2024ರಲ್ಲಿ ಅವರು ಇಲ್ಲಿಯವರೆಗೆ 34 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
Pic credit: Google
ಈ ವರ್ಷ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪೈಕಿ ಎಸ್ಟೋನಿಯಾದ ಬ್ಯಾಟ್ಸ್‌ಮನ್ ಸಾಹಿಲ್ ಚೌಹಾಣ್ ಕೂಡ ಸೇರಿದ್ದು, ಸಾಹಿಲ್ 32 ಸಿಕ್ಸರ್ ಬಾರಿಸಿದ್ದಾರೆ.
Pic credit: Google
ಫಿನ್ ಅಲೆನ್ ಈ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದು, ಈ ವರ್ಷ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 31 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
Pic credit: Google
2024ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರ ವಿಷಯದಲ್ಲಿ ಚರಿತ್ ಅಸಲಂಕಾ 8ನೇ ಸ್ಥಾನದಲ್ಲಿದ್ದು, ಈ ವರ್ಷ ಇದುವರೆಗೆ 30 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.