ಒಲಿಂಪಿಕ್ಸ್‌ನಲ್ಲಿ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಪದಕಗಳನ್ನು ಗೆದ್ದ ಐವರು ಭಾರತೀಯರಿವರು
09 August 2024
Pic credit: Google
ಪೃಥ್ವಿ ಶಂಕರ
Pic credit: Google
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯರ ಪದಕ ಭೇಟೆ ಮುಂದುವರೆದಿದೆ. ಇದುವರೆಗೆ ಭಾರತ ಐದು ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
Pic credit: Google
ಇದರಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಸತತ ಎರಡು ಒಲಿಂಪಿಕ್ಸ್ಗಳಲ್ಲಿ ಪದಕ ಗೆದ್ದ ಸಾಧನೆಯನ್ನು ಮಾಡಿದರು.
Pic credit: Google
2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಟ್ಟಿದ್ದ ನೀರಜ್ ಚೋಪ್ರಾ ಇದೀಗ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.
Pic credit: Google
ಭಾರತೀಯ ಒಲಿಂಪಿಕ್ ಇತಿಹಾಸದಲ್ಲಿ ನಾರ್ಮನ್ ಪ್ರಿಚರ್ಡ್ ಹೆಸರು ವಿಶೇಷವಾಗಿದೆ. ಅವರು 1900 ರ ಒಲಂಪಿಕ್ಸ್ನಲ್ಲಿ ಅಥ್ಲೆಟಿಕ್ಸ್ನಲ್ಲಿ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು.
Pic credit: Google
ಮನು ಭಾಕರ್ 2024 ರ ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಎರಡೂ ಕಂಚಿನ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದರು.
Pic credit: Google
ಸುಶೀಲ್ ಕುಮಾರ್ ಅವರು 2008 ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಮತ್ತು 2012 ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದು ಭಾರತದ ಅತ್ಯಂತ ಯಶಸ್ವಿ ಕುಸ್ತಿಪಟುಗಳಲ್ಲಿ ಒಬ್ಬರೆನಿಸಿಕೊಂಡರು.
Pic credit: Google
ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಜಾಗತಿಕ ಮನ್ನಣೆ ನೀಡಿದ ಪಿವಿ ಸಿಂಧು ಅವರು 2016 ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಮತ್ತು 2020 ರಲ್ಲಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದರು.