ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗೆದ್ದ ಆಟಗಾರರ ಪಟ್ಟಿ ಇಲ್ಲಿದೆ.
18 November 2023
1975 ರ ವಿಶ್ವಕಪ್‌ನ ಫೈನಲ್‌ನಲ್ಲಿ 102 ರನ್ಗಳ ಇನ್ನಿಂಗ್ಸ್ ಆಡಿದ್ದ ಕ್ಲೈವ್ ಲಾಯ್ಡ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು.
1979 ರ ವಿಶ್ವಕಪ್‌ನ ಫೈನಲ್‌ನಲ್ಲಿ 138 ರನ್ಗಳ ಇನ್ನಿಂಗ್ಸ್ ಆಡಿದ್ದ ವಿವ್ ರಿಚರ್ಡ್ಸ್ ಪಂದ್ಯದ ಆಟಗಾರ ಪ್ರಶಸ್ತಿ ಗೆದ್ದಿದ್ದರು.
1983 ರ ವಿಶ್ವಕಪ್‌ನ ಫೈನಲ್‌ನಲ್ಲಿ 26 ರನ್ ಜೊತೆಗೆ 3 ವಿಕೆಟ್ ಪಡೆದಿದ್ದ ಮೊಹಿಂದರ್ ಅಮರನಾಥ್ಗೆ ಈ ಪ್ರಶಸ್ತಿ ಒಲಿದಿತ್ತು.
1987 ರ ವಿಶ್ವಕಪ್ ಫೈನಲ್‌ನಲ್ಲಿ 75 ರನ್ಗಳ ಇನ್ನಿಂಗ್ಸ್ ಆಡಿದ್ದ ಡೇವಿಡ್ ಬೂನ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು.
1992 ರ ವಿಶ್ವಕಪ್‌ನ ಫೈನಲ್‌ನಲ್ಲಿ 33 ರನ್ ಹಾಗೂ 3 ವಿಕೆಟ್ ಪಡೆದಿದ್ದ ವಾಸಿಂ ಅಕ್ರಂ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
1996 ರ ವಿಶ್ವಕಪ್‌ನ ಫೈನಲ್‌ನಲ್ಲಿ ಅಜೇಯ 107 ರನ್ ಹಾಗೂ 3 ವಿಕೆಟ್ ಪಡೆದಿದ್ದ ಅರವಿಂದ ಡಿ ಸಿಲ್ವಾ ಪಂದ್ಯದ ಆಟಗಾರ ಪ್ರಶಸ್ತಿ ಪಡೆದಿದ್ದರು.
1999 ರ ವಿಶ್ವಕಪ್ ಫೈನಲ್‌ನಲ್ಲಿ 33 ರನ್ಗಳಿಗೆ 4 ವಿಕೆಟ್ ಉರುಳಿಸಿದ್ದ ಶೇನ್ ವಾರ್ನ್ ಈ ಪ್ರಶಸ್ತಿಗೆ ಭಾಜನರಾಗಿದ್ದರು.
2003ರ ವಿಶ್ವಕಪ್‌ನ ಫೈನಲ್‌ನಲ್ಲಿ 140 ರನ್ ಬಾರಿಸಿದ್ದ ರಿಕಿ ಪಾಂಟಿಂಗ್‌ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.
2007 ರ ವಿಶ್ವಕಪ್‌ನ ಫೈನಲ್‌ನಲ್ಲಿ 149 ರನ್ ಸಿಡಿಸಿದ್ದ ಆಡಮ್ ಗಿಲ್ಕ್ರಿಸ್ಟ್ಗೆ ಈ ಪ್ರಶಸ್ತಿ ಸಿಕ್ಕಿತ್ತು.
2011 ರ ವಿಶ್ವಕಪ್‌ನ ಫೈನಲ್‌ನಲ್ಲಿ ಅಜೇಯ 91 ರನ್ಗಳ ಇನ್ನಿಂಗ್ಸ್ ಆಡಿದ್ದ ಎಂಎಸ್ ಧೋನಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
2015 ರ ವಿಶ್ವಕಪ್‌ನ ಫೈನಲ್‌ನಲ್ಲಿ 36 ರನ್ಗಳಿಗೆ 3 ವಿಕೆಟ್ ಪಡೆದಿದ್ದ ಜೇಮ್ಸ್ ಫಾಕ್ನರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
2019 ರ ವಿಶ್ವಕಪ್‌ನ ಫೈನಲ್‌ನಲ್ಲಿ ಅಜೇಯ 84 ರನ್ ಬಾರಿಸಿದ್ದ ಬೆನ್ ಸ್ಟೋಕ್ಸ್ ಪಂದ್ಯದ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
\NEXT: ICC World Cup: ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಗೆದ್ದವರ ಪೈಕಿ ಇಬ್ಬರು ಭಾರತೀಯರು