ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಏಕದಿನ ಬೌಲರ್'ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಭಾರತದ ವೇಗಿ ಅಗ್ರಸ್ಥಾನ ಪಡೆದಿರುವುದು ವಿಶೇಷ.ಫೋನ್ ಇದೀಗ ಸೇಲ್ ಕಾಣುತ್ತಿದೆ.
ಐಸಿಸಿ ರ‍್ಯಾಂಕಿಂಗ್
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದಾರೆ.
ಸಿರಾಜ್ ನಂ. 1
ಕಳೆದ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದ ಸಿರಾಜ್ ಈ ಬಾರಿ 8 ಸ್ಥಾನ ಜಿಗಿತ ಕಂಡಿದ್ದಾರೆ. ಈ ಮೂಲಕ ಒಟ್ಟು 694 ರೇಟಿಂಗ್ ಪಡೆದು ಅಗ್ರಸ್ಥಾನ ಪಡೆದಿದ್ದಾರೆ.
8 ಸ್ಥಾನ ಜಿಗಿತ
ಏಷ್ಯಾಕಪ್ ಫೈನಲ್'ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್ 7 ಓವರ್ಗಳಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು.
6 ವಿಕೆಟ್
ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.
ಹ್ಯಾಝಲ್ವುಡ್ ಕುಸಿತ
ನ್ಯೂಝಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ಕೂಡ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಬೌಲ್ಟ್ 3ನೇ ಸ್ಥಾನ
ಅಫ್ಘಾನಿಸ್ತಾನ್ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್ ಒಟ್ಟು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.