ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ನೇಪಾಳ ತಂಡ ಹೊಸ ಇತಿಹಾಸ ಸೃಷ್ಟಿಸಿದೆ.

27 September 2023

ಏಷ್ಯನ್ ಗೇಮ್ಸ್​ನಲ್ಲಿ ಮಂಗೋಲಿಯಾ ವಿರುದ್ಧದ ಪಂದ್ಯದಲ್ಲಿ ನೇಪಾಳ ತಂಡ 314 ರನ್ ಕಲೆಹಾಕಿದೆ.

ಇದು ಟಿ20 ಕ್ರಿಕೆಟ್​ನಲ್ಲಿ ಇನ್ನಿಂಗ್ಸ್ ಒಂದರಲ್ಲಿ ದಾಖಲಾದ ಅತ್ಯಧಿಕ ಮೊತ್ತವೆಂಬ ದಾಖಲೆ ಸೃಷ್ಟಿಸಿದೆ.

ಸ್ಫೋಟಕ ಶತಕ ಸಿಡಿಸಿದ ಕುಶಾಲ್ ಮಲ್ಲ ನೇಪಾಳ ತಂಡದ ಐತಿಹಾಸಿಕ ಸಾಧನೆಯ ರುವಾರಿ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಕುಶಾಲ್ ಮಲ್ಲ ಕೇವಲ 50 ಎಸೆತಗಳಲ್ಲಿ 12 ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 137 ರನ್ ಚಚ್ಚಿದರು.

ಅಲ್ಲದೆ ಕೇವಲ 34 ಎಸೆತಗಳಲ್ಲಿ ಶತಕ ಪೂರೈಸಿದ ಕುಶಾಲ್, ಈ ಮೂಲಕ ರೋಹಿತ್ ಶರ್ಮಾ ದಾಖಲೆಯನ್ನು ಮುರಿದರು.

ವಾಸ್ತವವಾಗಿ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು.

ಇವರಲ್ಲದೆ ದಕ್ಷಿಣ ಆಫ್ರಿಕಾ ಆಟಗಾರ ಡೇವಿಡ್ ಮಿಲ್ಲರ್ ಕೂಡ 2017 ರಂದು ಬಾಂಗ್ಲಾದೇಶದ ವಿರುದ್ಧ 35 ಎಸೆತಗಳಲ್ಲಿ ಶತಕ ಬಾರಿಸಿದ್ದರು.