ಒಲಿಂಪಿಕ್ಸ್‌ನಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಪದಕ ಗೆದ್ದ ಭಾರತೀಯರಿವರು
02 August 2024
Pic credit: Google
ಪೃಥ್ವಿ ಶಂಕರ
Pic credit: Google
ನಾರ್ಮನ್ ಪ್ರಿಚರ್ಡ್ ಅವರು 1900 ರಲ್ಲಿ ಒಲಿಂಪಿಕ್ಸ್‌ನಲ್ಲಿ ಭಾರತದ ಪರ ಎರಡು ಪದಕಗಳನ್ನು ಗೆದ್ದಿದ್ದರು.
Pic credit: Google
ನಾರ್ಮನ್ ಪ್ರಿಚರ್ಡ್ 200 ಮೀ ಮತ್ತು 200 ಮೀ ಹಡಲ್ ಓಟದಲ್ಲಿ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.
Pic credit: Google
ಭಾರತ ಹಾಕಿ ತಂಡವು 1928, 1932, 1936, 1948, 1952, 1956, 1960, 1964, 1968, 1972, 1980 ಮತ್ತು 2020 ರಲ್ಲಿ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದಿದೆ. ಇದರಲ್ಲಿ 8 ಚಿನ್ನ, ಒಂದು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳು ಸೇರಿವೆ.
Pic credit: Google
ಸುಶೀಲ್ ಕುಮಾರ್ ಅವರು 2008 ರ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಮತ್ತು 2012 ರ ಬೆಳ್ಳಿ ಪದಕವನ್ನು ಗೆದ್ದುಕೊಟ್ಟಿದ್ದರು.
Pic credit: Google
ಸುಶೀಲ್ ಕುಮಾರ್ 66 ಕೆಜಿ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಈ ಎರಡೂ ಪದಕಗಳನ್ನು ಗೆದ್ದುಕೊಟ್ಟಿದ್ದರು.
Pic credit: Google
ಸ್ಟಾರ್ ಶೆಟ್ಲರ್ ಪಿವಿ ಸಿಂಧು 2016 ರ ರಿಯೊ ಒಲಿಂಪಿಕ್ಸ್ ಮತ್ತು 2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದಿದ್ದರು.
Pic credit: Google
ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್ ಇದುವರೆಗೆ ಎರಡು ಪದಕಗಳನ್ನು ಗೆದ್ದಿದ್ದಾರೆ.
Pic credit: Google
ಭಾರತದ ಪರವಾಗಿ ಮನು ಭಾಕರ್ ಅವರು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.