ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ 7 ಭಾರತೀಯ ಮಹಿಳಾ ಅಥ್ಲೀಟ್ಸ್

25  July 2024

Pic credit - Google

ಪೃಥ್ವಿಶಂಕರ

Pic credit -  Google

ಕರ್ಣಂ ಮಲ್ಲೇಶ್ವರಿ ಅವರು 2000ರ ಸಿಡ್ನಿ ಒಲಿಂಪಿಕ್ಸ್‌ನಲ್ಲಿ 69 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕರ್ಣಂ ಮಲ್ಲೇಶ್ವರಿ

Pic credit -  Google

2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ 51 ಕೆಜಿ ವಿಭಾಗದಲ್ಲಿ ಮೇರಿ ಕೋಮ್ ಬಾಕ್ಸಿಂಗ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಬಾಕ್ಸಿಂಗ್‌ನಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮೇರಿ ಕೋಮ್

Pic credit -  Google

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ 2012ರ ಲಂಡನ್ ಒಲಿಂಪಿಕ್ಸ್‌ನ ಮಹಿಳೆಯರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ಸೈನಾ ನೆಹ್ವಾಲ್

Pic credit -  Google

ಇದರೊಂದಿಗೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಸೈನಾ ನೆಹ್ವಾಲ್

Pic credit -  Google

ಪಿವಿ ಸಿಂಧು 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

ಪಿವಿ ಸಿಂಧು

Pic credit -  Google

ಇದರ ನಂತರ, ಅವರು 2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಎರಡು ವೈಯಕ್ತಿಕ ಒಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ.

ಪಿವಿ ಸಿಂಧು

Pic credit -  Google

ಸಾಕ್ಷಿ ಮಲಿಕ್ ಅವರು 2016 ರ ರಿಯೊ ಒಲಿಂಪಿಕ್ಸ್‌ನಲ್ಲಿ 58 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ ಅವರು ಕಾಮನ್‌ವೆಲ್ತ್ ಗೇಮ್ಸ್‌ನಲ್ಲೂ ಪದಕ ಗೆದ್ದಿದ್ದರು.

ಸಾಕ್ಷಿ ಮಲಿಕ್

Pic credit -  Google

ವೇಟ್‌ಲಿಫ್ಟರ್ ಮೀರಾಬಾಯಿ ಚಾನು  2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಮೀರಾಬಾಯಿ ಚಾನು

Pic credit -  Google

2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ 64-69 ಕೆಜಿ ವಿಭಾಗದಲ್ಲಿ ಲೊವ್ಲಿನಾ ಬೊರ್ಗೊಹೈನ್ ಬಾಕ್ಸಿಂಗ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಏಕೈಕ ಭಾರತೀಯ ಬಾಕ್ಸರ್ ಎನಿಸಿಕೊಂಡಿದ್ದಾರೆ.

ಲೊವ್ಲಿನಾ ಬೊರ್ಗೊಹೈನ್