ಹುರಿಗಡಲೆಯಲ್ಲಿ  ಕಾರ್ಬೋಹೈಡ್ರೇಟ್, ಪ್ರೊಟೀನ್, ಕ್ಯಾಲ್ಸಿಯಂ, ಕಬ್ಬಿಣದ ಅಂಶ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ.

ಹುರಿದ ಬಾದಾಮಿ ಪೌಷ್ಟಿಕಾಂಶಗಳು ಹೇರಳವಾಗಿದ್ದು, ಹೃದಯದ ಆರೋಗ್ಯದಿಂದ ಹಿಡಿದು ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ.

ಮೊಟ್ಟೆಗಳಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಜೊತೆಗೆ ಮೊಟ್ಟೆಯ ಸೇವನೆಯು ದೇಹದ ಆಯಾಸವನ್ನು ಸಹ ಕಡಿಮೆ ಮಾಡುತ್ತದೆ.

ಬೆರಿಹಣ್ಣುಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ. ಜೊತೆಗೆ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ತೂಕ ನಷ್ಟ, ಚರ್ಮದ ಆರೋಗ್ಯ ಮತ್ತು ಮಧುಮೇಹಿಗಳಿಗೆ ಓಟ್ ಮೀಲ್ ಅತ್ಯಂತ ಪ್ರಯೋಜನಕಾರಿಯಾಗಿ ಆಹಾರವಾಗಿದೆ.

ಕ್ಯಾರೆಟ್ ನಲ್ಲಿರುವ ಫೈಬರ್ ಮಲಬದ್ಧತೆಯನ್ನು ಕಡಿಮೆ ಮಾಡಲು ಮತ್ತು ಮೂಳೆಗಳನ್ನು ಬಲಪಡಿಸಲು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ವೆಜಿಟೇಬಲ್ ಸ್ಟಿಕ್ ನ್ನು ನೀವು ಆನಂದಿಸುತ್ತಾ ಸವಿಯಬಹುದು. ತರಕಾರಿಗಳಲ್ಲಿ ಪೌಷ್ಟಿಕಾಂಶಗಳು ಹೇರಳವಾಗಿದೆ ಎಂಬುದು ಈಗಾಗಲೇ ತಿಳಿದಿರುವ ವಿಷಯ.