ಇನ್ಮುಂದೆ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ'; ಪ್ರಧಾನಿ ಘೋಷಣೆ

26 August 2023

ಇಂದು ಬೆಳಿಗ್ಗೆ(ಆ. 26) ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

26 August 2023

ಪೀಣ್ಯದ ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಇಸ್ರೋ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ.

26 August 2023

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ.

26 August 2023

ಚಂದ್ರಯಾನ-3 ಯಶಸ್ವಿಯ ಸ್ಮರಣೀಯ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಣೆಗೆ ಘೋಷಣೆ.

26 August 2023

ಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳವನ್ನು 'ಶಿವಶಕ್ತಿ ಪಾಯಿಂಟ್​​' ಎಂದು ನಾಮಕರಣ ಮಾಡಿದ ಪ್ರಧಾನಿ.

26 August 2023

ಚಂದ್ರಯಾನ-2 ಹೆಜ್ಜೆಗುರುತುಗಳನ್ನು ಬಿಟ್ಟ ಚಂದ್ರನ ಮೇಲ್ಮೈಯನ್ನು ‘ತಿರಂಗಾ ಪಾಯಿಂಟ್​​​’ ಎಂದು ಕರೆಯಲಾಗುವುದು.

26 August 2023

ಇಸ್ರೋ ವಿಜ್ಞಾನಿಗಳ ಸಾಧನೆ ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗಲಿದೆ ಎಂದ ಪ್ರಧಾನಿ.

26 August 2023

ಮೋದಿಗೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೋ ಉಡುಗೊರೆ ನೀಡಿದ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್.

26 August 2023

ಬೆಂಗಳೂರಿಗೆ ಬಂದಿಳಿದ ಮೋದಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ ಸೇರಿದಂತೆ ಗಣ್ಯರು ಬರಮಾಡಿಕೊಂಡರು.

26 August 2023