09 June 2024

3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪಟ್ಟಾಭಿಷೇಕ

Author :Akshatha Vorkady

ಮೋದಿ ಪಟ್ಟಾಭಿಷೇಕ

ನರೇಂದ್ರ ಮೋದಿ ಸತತ 3ನೇ ಬಾರಿಗೆ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ

ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. 

ಗೌರವ ಸಲ್ಲಿಸಿದ ಮೋದಿ

ಪ್ರಮಾಣವಚನಕ್ಕೂ ಮುನ್ನ ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿಗೆ ಗೌರವ ಸಲ್ಲಿಸಿದ ಮೋದಿ. 

ಪುಷ್ಪ ನಮನ

ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ.

ಅಟಲ್ ಬಿಹಾರಿ ವಾಜಪೇಯಿ

ಬಳಿಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ  ಗೌರವ ಸಲ್ಲಿಸಿದ ನರೇಂದ್ರ ಮೋದಿ. 

ಯೋಧರಿಗೆ ಗೌರವ

ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಮೋದಿ, ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಕ್ಷಣ. 

3ನೇ ಬಾರಿಗೆ ಪ್ರಧಾನಿ

ಜವಹರ್ ಲಾಲ್ ನೆಹರೂ ನಂತರ ದೇಶದಲ್ಲಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ.

ಹಲವು ದೇಶಗಳ ನಾಯಕರು

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಹಲವು ದೇಶಗಳ ನಾಯಕರು ಭಾಗವಹಿಸಲಿದ್ದಾರೆ.