ಪ್ರಜ್ವಲ್​ ರೇವಣ್ಣಗೆ ಬಿಗ್ ಶಾಕ್ ನೀಡಿದ ಕರ್ನಾಟಕ ಹೈಕೋರ್ಟ್ 

01 September 2023

Pic credit - Google

ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

Pic credit - Facebook/Prajwal Revanna

ಎ ಮಂಜು,ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ಕೋರ್ಟ್ ಈ ಆದೇಶ ಹೊರಡಿಸಿದೆ.

Pic credit - Facebook/Prajwal Revanna

2019ರ ಲೋಕಸಭಾ ಚುನಾವಣಾ ಸಂದರ್ಭದ ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್ ರೇವಣ್ಣ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ.

Pic credit - Facebook/Prajwal Revanna

ಹೀಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.

Pic credit - Facebook/Prajwal Revanna

ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ: ವಕೀಲ ದೇವರಾಜೇಗೌಡ

Pic credit - Facebook/Prajwal Revanna

ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. 

Pic credit - Facebook/Prajwal Revanna

ಇಂದು (ಸೆ. 01) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಪ್ರಜ್ವಲ್​ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಎಂದು ಆದೇಶಿಸಿದೆ.

Pic credit - Google