ಖಡಕ್ ಖಾಕಿ ಲುಕ್​​​​​​ನಲ್ಲಿ  ಡಾಲಿ ಧನಂಜಯ್

ಡಾಲಿ ಧನಂಜಯ್ ನಟನೆಯ ಗುರುದೇವ್ ಹೊಯ್ಸಳ ಸಿನಿಮಾ ಇಂದು (ಮಾರ್ಚ್ 30) ರಂದು ಅದ್ಧೂರಿಯಾಗಿ ತೆರೆಕಂಡಿದೆ.

ನಟ ಕಿಚ್ಚ ಸುದೀಪ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ.

ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ, ವಿಜಯ್ ಎನ್  ನಿರ್ದೇಶಿಸಿರುವ ಈ ಚಿತ್ರದಲ್ಲಿ ಅಮೃತಾ ಐಯ್ಯಂಗಾರ್ ನಾಯಕಿಯಾಗಿ ನಟಿಸಿದ್ದಾರೆ.

ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಬೆಳಗಾವಿಯ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ಹೆಣೆದಿರುವ ಕಥೆ ಇದಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ನಟ ಡಾಲಿ ಧನಂಜಯ್ ಅವರ 25ನೇ ಸಿನಿಮಾ ಈ ಗುರುದೇವ್ ಹೊಯ್ಸಳ.